ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬೆಳಗಾವಿ ನಮ್ಮದು; ಸೋನಿಯಾ, ಸಿಂಗ್‌ಗೆ ಮಹಾರಾಷ್ಟ್ರ (Maha-K'taka boundary | Sonia Gandhi | Manmohan Singh | Belgaum)
Bookmark and Share Feedback Print
 
ಕರ್ನಾಟಕದೊಂದಿಗಿನ ಗಡಿ ವಿವಾದದಲ್ಲಿ ಮಹಾರಾಷ್ಟ್ರದ ಜನತೆ ಮತ್ತು ಕರ್ನಾಟಕದಲ್ಲಿರುವ ಮರಾಠಿಗರ ಭಾವನೆಗಳನ್ನು ಗೌರವಿಸಬೇಕು ಎಂದು ಮಹಾರಾಷ್ಟ್ರ ಕಾಂಗ್ರೆಸ್ ಘಟಕವು ಕೇಂದ್ರಕ್ಕೆ ಪತ್ರ ಬರೆದಿದೆ.

ಕಾಂಗ್ರೆಸ್ ಅಧಿನಾಯಕಿ, ಯುಪಿಎ ಅಧ್ಯಕ್ಷೆ ಸೋನಿಯಾ ಗಾಂಧಿ, ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಮತ್ತು ರಕ್ಷಣಾ ಸಚಿವ, ಮಹಾರಾಷ್ಟ್ರದ ವ್ಯಾಪ್ತಿಯಲ್ಲಿನ ಎಐಸಿಸಿ ಪ್ರಧಾನ ಕಾರ್ಯದರ್ಶಿ ಎ.ಕೆ. ಆಂಟನಿಯವರಿಗೆ ತಾನು ಪತ್ರ ಬರೆದಿರುವುದಾಗಿ ಮಹಾರಾಷ್ಟ್ರ ಪ್ರದೇಶ ಕಾಂಗ್ರೆಸ್ ಸಮಿತಿ ಅಧ್ಯಕ್ಷ ಮಾಣಿಕ್ ರಾವ್ ಠಾಕ್ರೆ ತಿಳಿಸಿದ್ದಾರೆ.

ಬೆಳಗಾವಿ, ಗುಲ್ಬರ್ಗಾ, ಬೀದರ್ ಮತ್ತು ಕಾರವಾರ ಜಿಲ್ಲೆಗಳ 814ಕ್ಕೂ ಹೆಚ್ಚು ಗ್ರಾಮಗಳು ತನ್ನ ವ್ಯಾಪ್ತಿಗೆ ಬರುತ್ತದೆ ಎಂದು ಸುಪ್ರೀಂ ಕೋರ್ಟ್‌ಗೆ ಹೋಗಿದ್ದ ಮಹಾರಾಷ್ಟ್ರದ ಅರ್ಜಿಯನ್ನು ತಿರಸ್ಕರಿಸುವಂತೆ ಕೇಂದ್ರವು ಅಫಿದಾವಿತ್ ಸಲ್ಲಿಸಿದ ನಂತರ ಮಹಾರಾಷ್ಟ್ರ ಕಾಂಗ್ರೆಸ್ ಕೇಂದ್ರ ನಾಯಕರಿಗೆ ಪತ್ರ ಬರೆದಿದೆ.

ಮರಾಠಿ ಭಾಷಿಗರಿರುವ ಗ್ರಾಮಗಳನ್ನು ರಾಜ್ಯದೊಂದಿಗೆ ವಿಲೀನಗೊಳಿಸಬೇಕೆಂದು ಬೆಳಗಾವಿ ಮತ್ತು ಮಹಾರಾಷ್ಟ್ರದ ಜನತೆ ಬಯಸುತ್ತಿದ್ದಾರೆ. ಇದು ತುಂಬಾ ಸೂಕ್ಷ್ಮ ವಿಚಾರವಾಗಿದ್ದು, ಜನತೆಯ ಭಾವನೆಗಳನ್ನು ಗೌರವಿಸುವ ಅಗತ್ಯವಿದೆ. ನಮ್ಮ ಪ್ರಕಾರ ಭಾಷೆಯ ಆಧಾರದಲ್ಲಿ ಕರ್ನಾಟಕದ ಕೆಲವು ಪ್ರದೇಶಗಳನ್ನು ರಾಜ್ಯಕ್ಕೆ ಸೇರಿಸಬೇಕು. ಈ ಸಂಬಂಧ ಸೂಕ್ತ ಸಲಹೆಗಳನ್ನು ನಮ್ಮ ಮೇಲಿನವರಿಗೆ ನೀಡಿದ್ದು, ಸೌಹಾರ್ದ ರೀತಿಯಲ್ಲಿ ಸಮಸ್ಯೆಯನ್ನು ಪರಿಹರಿಸುವಂತೆ ಪತ್ರದಲ್ಲಿ ಬರೆದಿದ್ದೇನೆ ಎಂದು ಠಾಕ್ರೆ ತಿಳಿಸಿದ್ದಾರೆ.

ಕೇಂದ್ರದ ಶಿಫಾರಸಿನಿಂದ ಮುಖಭಂಗಕ್ಕೀಡಾಗಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚೌಹಾನ್ ಈಗಾಗಲೇ ಗೃಹಸಚಿವ ಪಿ. ಚಿದಂಬರಂ ಅವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ ತನ್ನ ಕಳವಳವನ್ನು ವ್ಯಕ್ತಪಡಿಸಿದ್ದಾರೆ. ಯಾವುದೇ ಕಾರಣಕ್ಕೂ ಇದನ್ನು ಒಪ್ಪಿಕೊಳ್ಳಲು ಸಾಧ್ಯವಿಲ್ಲ, ಮರಾಠಿ ಭಾಷಿಗರ ಪ್ರದೇಶಗಳು ಮಹಾರಾಷ್ಟ್ರಕ್ಕೆ ಸೇರಬೇಕೆಂಬ ನಮ್ಮ ನಿಲುವಿಗೆ ಬದ್ಧವಾಗಿದ್ದೇವೆ ಎಂದು ಚೌಹಾನ್ ಇದೇ ಸಂದರ್ಭದಲ್ಲಿ ಪುನರುಚ್ಛರಿಸಿದ್ದಾರೆ.

ಮಹಾರಾಷ್ಟ್ರದ ಬಿಜೆಪಿ, ಎನ್‌ಸಿಪಿ, ಶಿವಸೇನೆ ಸೇರಿದಂತೆ ಹಲವು ಪಕ್ಷಗಳು ಯುಪಿಎ ಸರಕಾರದ ನಿರ್ಧಾರವನ್ನು ತೀವ್ರವಾಗಿ ವಿರೋಧಿಸಿವೆ. ಸಂಯುಕ್ತ ಮಹಾರಾಷ್ಟ್ರ ಏಕೀಕರಣ ಸಮಿತಿಯು ಕೂಡ ಇದಕ್ಕೆ ದನಿಗೂಡಿಸಿದೆ. ಆದರೂ ಕೇಂದ್ರವು ತನ್ನ ನಿರ್ಧಾರವನ್ನು ಬದಲಿಸುವ ಸಾಧ್ಯತೆಗಳಿಲ್ಲ ಎಂದು ಹೇಳಲಾಗುತ್ತಿದೆ.

ಕೇಂದ್ರ ಈಗಾಗಲೇ ತನ್ನ ಅಫಿದಾವಿತ್ ಸಲ್ಲಿಸಿದೆ. ಈ ಪ್ರಕರಣ ಮುಂದಿನ ಸೋಮವಾರ, ಜುಲೈ 12ರಂದು ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆಗೆ ಬರಲಿದೆ. ಅಂತಿಮ ತೀರ್ಮಾನವನ್ನು ಸರ್ವೋಚ್ಛ ನ್ಯಾಯಾಲಯ ನೀಡಲಿದೆ.
ಸಂಬಂಧಿತ ಮಾಹಿತಿ ಹುಡುಕಿ