ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮುಸ್ಲಿಂ ಮೀಸಲಾತಿಗೆ ಒಮ್ಮತ ಅಗತ್ಯವಿದೆ: ಪ್ರಧಾನಿ (Manmohan Singh | Jamiat Ulama-I-Hind | Muslim community | Andhra Pradesh)
Bookmark and Share Feedback Print
 
ಅಲ್ಪಸಂಖ್ಯಾತರ ಕಲ್ಯಾಣಕ್ಕೆ ಕಾಂಗ್ರೆಸ್ ನೇತೃತ್ವದ ಯುಪಿಎ ಸರಕಾರ ಬದ್ದವಾಗಿದೆ ಎಂದು ಪುನರುಚ್ಛರಿಸಿರುವ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್, ಮುಸ್ಲಿಂ ಸಮುದಾಯಕ್ಕೆ ಮೀಸಲಾತಿ ನೀಡುವ ಸಂಬಂಧ ರಾಷ್ಟ್ರೀಯ ಮಟ್ಟದಲ್ಲಿ ಒಮ್ಮತ ಮೂಡಿಸುವ ಅಗತ್ಯವಿದೆ ಎಂದಿದ್ದಾರೆ.

ಜಮಾತ್ ಉಲೇಮಾ ಇ ಹಿಂದ್ ಸಂಘಟನೆಯು ಸಲ್ಲಿಸಿದ್ದ ಮನವಿಗೆ ಪ್ರತಿಕ್ರಿಯೆ ರೂಪವಾಗಿ ಸಂಘಟನೆಯ ರಾಷ್ಟ್ರೀಯ ಅಧ್ಯಕ್ಷ ಮೌಲಾನಾ ಖಾರಿ ಮೊಹಮ್ಮದ್ ಉಸ್ಮಾನ್ ಅವರಿಗೆ ಪತ್ರ ಬರೆದಿರುವ ಪ್ರಧಾನಿ, ದೇಶದ ಅಲ್ಪಸಂಖ್ಯಾತರ ಅಭಿವೃದ್ಧಿಗೆ ಸರಕಾರವು ಬದ್ಧವಾಗಿದೆ ಎಂದು ಹೇಳಿದ್ದಾರೆಂದು ಸಂಘಟನೆಯ ಆಂಧ್ರಪ್ರದೇಶ ಘಟಕ ತಿಳಿಸಿದೆ.

ಮುಸ್ಲಿಂ ಸಮುದಾಯಕ್ಕೆ ಮೀಸಲಾತಿಗಳನ್ನು ನೀಡುವ ಸಂಬಂಧ ಮುಂದುವರಿಯಲು ರಾಷ್ಟ್ರ ಮಟ್ಟದಲ್ಲಿ ವಿಶಾಲ ರೂಪದ ಒಮ್ಮತಾಭಿಪ್ರಾಯವನ್ನು ಮೂಡಿಸಬೇಕಾದ ಅಗತ್ಯವಿದೆ ಎಂದು ಪ್ರಧಾನ ಮಂತ್ರಿಯವರು ಹೇಳಿದ್ದಾರೆ.

ಇದೇ ಸಂದರ್ಭದಲ್ಲಿ ಸರಕಾರವು ಮುಸ್ಲಿಮರ ಕಲ್ಯಾಣಕ್ಕಾಗಿ ತೆಗೆದುಕೊಂಡಿರುವ ಕ್ರಮಗಳನ್ನು ಉಲ್ಲೇಖಿಸಿರುವ ಸಿಂಗ್, ಅಲ್ಪಸಂಖ್ಯಾತರ ವ್ಯವಹಾರಗಳ ಸಚಿವಾಲಯಕ್ಕೆ 2007ರಲ್ಲಿ 500 ಕೋಟಿ ರೂಪಾಯಿಗಳನ್ನಷ್ಟೇ ನೀಡಲಾಗಿತ್ತು; ಅದನ್ನು 2010-11ರ ಬಜೆಟ್‌ನಲ್ಲಿ 2,600 ಕೋಟಿ ರೂಪಾಯಿಗಳಿಗೆ ಏರಿಸಲಾಗಿದೆ ಎಂದು ಮಾಹಿತಿ ನೀಡಿದ್ದಾರೆ.

ಶಾಲೆ, ಕಾಲೇಜು ಮತ್ತು ಯುನಿವರ್ಸಿಟಿಗಳಲ್ಲಿ ವಿದ್ಯಾಭ್ಯಾಸ ನಡೆಸುತ್ತಿರುವ ಅಲ್ಪಸಂಖ್ಯಾತ ಸಮುದಾಯದ 20 ಲಕ್ಷಕ್ಕೂ ಹೆಚ್ಚು ವಿದ್ಯಾರ್ಥಿಗಳಿಗೆ ಸರಕಾರವು ಪ್ರತಿ ವರ್ಷ ವಿದ್ಯಾರ್ಥಿ ವೇತನವನ್ನು ನೀಡುತ್ತಿದೆ. ಅಲ್ಲದೆ ದೇಶದಲ್ಲಿನ 80ಕ್ಕೂ ಹೆಚ್ಚು ಮುಸ್ಲಿಂ ಪ್ರಾಬಲ್ಯದ ಜಿಲ್ಲೆಗಳ ವಿಶೇಷ ಅಭಿವೃದ್ಧಿ ಯೋಜನೆಗಳಿಗೆ 2,000 ಕೋಟಿ ರೂಪಾಯಿಗಳಿಗೂ ಅಧಿಕ ನಿಧಿಯನ್ನು ಮಂಜೂರು ಮಾಡಲಾಗಿದೆ ಎಂದೂ ಅವರು ವಿವರಣೆ ನೀಡಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ