ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಾನು ಹೆಮ್ಮೆಯ ಕಾಂಗ್ರೆಸ್ಸಿಗ: ರಾಜ್ಯಪಾಲ ಭಾರದ್ವಾಜ್ (Karnataka Governor | H R Bharadwaj | B S Yeddyurappa | Congress)
Bookmark and Share Feedback Print
 
ರಾಜ್ಯಪಾಲರು ಕಾಂಗ್ರೆಸ್ ಏಜೆಂಟ್‌ರಂತೆ ವರ್ತಿಸುತ್ತಿದ್ದಾರೆ ಎಂಬ ಬಿಜೆಪಿ ನಾಯಕರ ಟೀಕೆಗಳಿಗೆ ಅಚ್ಚರಿಯ ಪ್ರತಿಕ್ರಿಯೆ ನೀಡಿರುವ ಎಚ್.ಆರ್. ಭಾರದ್ವಾಜ್, ಈ ಕುರಿತು ನನಗೆ ಹೆಮ್ಮೆಯಿದೆ ಎಂದು ಹೇಳಿಕೊಂಡಿದ್ದಾರೆ.

ಎಚ್.ಆರ್. ಭಾರದ್ವಾಜ್ ಸಂವಿಧಾನದ ಕಾವಲುಗಾರನಂತೆ ವರ್ತಿಸುವ ಬದಲು ಕಾಂಗ್ರೆಸ್ ಏಜೆಂಟರಂತೆ ನಡೆದುಕೊಳ್ಳುತ್ತಿದ್ದಾರೆ ಎಂದು ಆಡಳಿತ ಪಕ್ಷ ಬಿಜೆಪಿ ಆರೋಪಿಸಿತ್ತು. ಇದಕ್ಕೆ ದೆಹಲಿಯಲ್ಲಿ ಪ್ರತಿಕ್ರಿಯಿಸಿದ ಅವರು, 'ಹೌದು, ನಾನು ಕಾಂಗ್ರೆಸ್ಸಿಗ ಎಂದು ಹೇಳಿಕೊಳ್ಳಲು ಹೆಮ್ಮೆಯಾಗುತ್ತಿದೆ' ಎಂದಿದ್ದಾರೆ.

ಅದೇ ಹೊತ್ತಿಗೆ ಬಿಜೆಪಿ ಮತ್ತು ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ವಿರುದ್ಧ ವಾಗ್ದಾಳಿ ನಡೆಸಿರುವ ರಾಜ್ಯಪಾಲರು, ಬಿಜೆಪಿಗೆ ನನ್ನ ಶಕ್ತಿಯನ್ನು ಉಡುಗಿಸಲು ಸಾಧ್ಯವಿಲ್ಲ; ರಾಜ್ಯವನ್ನು ಲೂಟಿ ಮಾಡಲು ಬಿಜೆಪಿ ಸರಕಾರಕ್ಕೆ ಅವಕಾಶ ನೀಡುವುದಿಲ್ಲ ಎಂದಿದ್ದಾರೆ.

ಕರ್ನಾಟಕವನ್ನು ಲೂಟಿ ಮಾಡಲು ನಾನು ಅವಕಾಶ ನೀಡಲಾರೆ. ರಾಜ್ಯದಲ್ಲಿ ಜಂಗಲ್‌ರಾಜ್ ಪರಿಸ್ಥಿತಿ ನೆಲೆಸಿದೆ. ಈ ಸಂಬಂಧ ನಾನು ಕೇಂದ್ರ ಮತ್ತು ರಾಷ್ಟ್ರಪತಿಯವರಿಗೆ ವಿವರಣೆ ನೀಡಿದ್ದೇನೆ. ರಾಷ್ಟ್ರಪತಿ ಪ್ರತಿಭಾ ಪಾಟೀಲ್ ಅವರನ್ನು ರಾಜ್ಯಕ್ಕೆ ಭೇಟಿ ನೀಡಲು ಆಹ್ವಾನಿಸಿದ್ದೇನೆ ಎಂದು ತಿಳಿಸಿದ್ದಾರೆ.

ಯಡಿಯೂರಪ್ಪನವರ ಸರಕಾರದ ಸಚಿವರು ನನಗೆ ಸಹಕಾರ ನೀಡುತ್ತಿಲ್ಲ ಎಂದು ದೂರಿರುವ ಭಾರದ್ವಾಜ್, ಅವರ ಸರಕಾರವು ತನ್ನ ಆತ್ಮಸಾಕ್ಷಿಯನ್ನು ಪರಿಶೀಲಿಸಿಕೊಳ್ಳುವ ಅಗತ್ಯವಿದೆ. ಸುಖಾಸುಮ್ಮನೆ ಆರೋಪ ಮಾಡುವ ಮೊದಲು ಸತ್ಯ ಏನೆಂಬುದನ್ನು ಗಮನಿಸಲಿ ಎಂದು ಸಲಹೆ ನೀಡಿದ್ದಾರೆ.

ರಾಜ್ಯಪಾಲ ಭಾರದ್ವಾಜ್ ಕಳೆದ ಐದು ದಿನಗಳಿಂದ ರಾಜಧಾನಿಯಲ್ಲಿ ಬೀಡು ಬಿಟ್ಟಿದ್ದಾರೆ. ಆರಂಭದಲ್ಲಿ ರಾಷ್ಟ್ರಪತಿಯವರನ್ನು ಭೇಟಿ ಮಾಡಿದ್ದ ಭಾರದ್ವಾಜ್, ನಂತರ ಗೃಹ ಸಚಿವ ಪಿ. ಚಿದಂಬರಂ ಮತ್ತು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ಮುಖಾಮುಖಿಯಾಗಿ ರಾಜ್ಯದ ರಾಜಕೀಯ ಪರಿಸ್ಥಿತಿಯನ್ನು ವಿವರಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ