ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪಶ್ಚಿಮ ಬಂಗಾಳದಲ್ಲಿ ತೃಣಮೂಲ ನಾಯಕನ ಹತ್ಯೆ
(Trinamool Congress | Gunmen | Bankura | Samir Pal shot dead |JMM activist)
ಬಂಕುರಾ (ಪಶ್ಚಿಮ ಬಂಗಾಳ), ಭಾನುವಾರ, 18 ಜುಲೈ 2010( 14:37 IST )
ಜಿಲ್ಲೆಯ ಬರಿಕುಲ್ ಗ್ರಾಮದಲ್ಲಿ ಸ್ಥಳೀಯ ತೃಣಮೂಲ ಕಾಂಗ್ರೆಸ್ ನಾಯಕ ಹಾಗೂ ಜಾರ್ಖಂಡ್ ಮುಕ್ತಿ ಮೋರ್ಚಾ ಸದಸ್ಯನನ್ನು ಕೆಲ ಅಪರಿಚಿತರು ಗುಂಡಿನ ದಾಳಿ ನಡೆಸಿ ಹತ್ಯೆಗೈದಿದ್ದಾರೆ.
ನಕ್ರಾಪೊಚಾ ಗ್ರಾಮದ ಮನೆಯಲ್ಲಿದ್ದ ತೃಣಮೂಲ ಕಾಂಗ್ರೆಸ್ ನಾಯಕ ಸಮೀರ್ ಪಾಲ್ ಅವರನ್ನು, ಕೆಲ ಅಪರಿಚಿತ ವ್ಯಕ್ತಿಗಳು ಗುಂಡಿನ ದಾಳಿ ನಡೆಸಿ ಹತ್ಯೆ ಮಾಡಿದ್ದಾರೆ ಎಂದು ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಪ್ರಣಬ್ ಕುಮಾರ್ ತಿಳಿಸಿದ್ದಾರೆ.
ಪಾಲ್, ಜಾರ್ಖಂಡ್ ಮುಕ್ತಿ ಮೋರ್ಚಾ ಕಾರ್ಯಕರ್ತನಾಗಿದ್ದು,ಕಳೆದ ಜುಲೈ 8ರಂದು ತೃಣಮೂಲ ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದರು ಎಂದು ಪಕ್ಷದ ಮೂಲಗಳು ತಿಳಿಸಿವೆ.