ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬೆಳಗಾವಿ ನಮ್ಮದು; ಸಂಸತ್‌ ಎದುರು ಶಿವಸೇನೆ ಪ್ರತಿಭಟನೆ (Shiv Sena | Belgaum dispute | Maharashtra | Karnataka)
Bookmark and Share Feedback Print
 
ಬೆಳಗಾವಿ ನಮ್ಮದು ಎಂದು ಪುನರುಚ್ಛರಿಸಿರುವ ಶಿವಸೇನೆ ಇಂದು ಸಂಸತ್ತಿನ ಪ್ರಧಾನ ದ್ವಾರದ ಬಳಿ ಪ್ರತಿಭಟನೆ ನಡೆಸಿದ್ದು, ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ವಿವಾದ ಪರಿಹಾರಕ್ಕಾಗಿ ಮಧ್ಯಪ್ರವೇಶ ಮಾಡಬೇಕೆಂದು ಆಗ್ರಹಿಸಿದೆ.

ಇಂದು ಬೆಳಿಗ್ಗೆ ಶಿವಸೇನೆ ನಾಯಕ ಮನೋಹರ್ ಜೋಷಿ ನೇತೃತ್ವದಲ್ಲಿ ಶಿವಸೇನೆ ಸಂಸದರು ಸಂಸತ್ ಎದುರು ಪ್ರತಿಭಟನೆ ನಡೆಸಿದರು. ಮಹಾರಾಷ್ಟ್ರ ಮತ್ತು ಕರ್ನಾಟಕಗಳ ನಡುವಿನ ಬೆಳಗಾವಿ ವಿವಾದದಲ್ಲಿ ಸಿಂಗ್ ಮಧ್ಯಪ್ರವೇಶಿಸಬೇಕು ಎಂದು ಈ ಸಂದರ್ಭದಲ್ಲಿ ಭಿತ್ತಿಪತ್ರಗಳನ್ನು ಪ್ರದರ್ಶಿಸುತ್ತಾ ಆಗ್ರಹಿಸಲಾಯಿತು.

ಅದೇ ಹೊತ್ತಿಗೆ ಕೇಂದ್ರ ಸರಕಾರವು ಕರ್ನಾಟಕ ಪರವಹಿಸಿ ಸುಪ್ರೀಂ ಕೋರ್ಟಿಗೆ ಸಲ್ಲಿಸಿರುವ ಅಫಿದಾವಿತ್ ವಿರುದ್ಧವೂ ಶಿವಸೇನೆ ವಾಗ್ದಾಳಿ ನಡೆಸಿದೆ. ಇದನ್ನು ತಕ್ಷಣವೇ ವಾಪಸ್ ಪಡೆದುಕೊಂಡು ಮರಾಠಿಗರ ಭಾವನೆಗಳನ್ನು ಗೌರವಿಸಬೇಕು, ಕೇಂದ್ರದಿಂದ ನಮಗೆ ಅನ್ಯಾಯವಾಗುತ್ತಿದೆ ಎಂದೂ ಪ್ರತಿಭಟನಾಕಾರರು ಒತ್ತಾಯಿಸಿದ್ದಾರೆ.

2004ರಲ್ಲಿ ಸುಪ್ರೀಂ ಕೋರ್ಟ್ ಮೊರೆ ಹೋಗಿದ್ದ ಮಹಾರಾಷ್ಟ್ರ, ಕರ್ನಾಟಕ ಗಡಿ ಪ್ರದೇಶದಲ್ಲಿನ ಬೆಳಗಾವಿ, ಕಾರವಾರ, ಬೀದರ್ ಮತ್ತು ಗುಲ್ಬರ್ಗಾ ಜಿಲ್ಲೆಗಳಲ್ಲಿನ 814ಕ್ಕೂ ಹೆಚ್ಚು ಗ್ರಾಮಗಳು ತನ್ನ ವ್ಯಾಪ್ತಿಗೆ ಬರುತ್ತದೆ. ಇಲ್ಲಿನ ಬಹುತೇಕ ಜನರು ಮರಾಠಿ ಮನೆ ಭಾಷಿಗರಾಗಿದ್ದಾರೆ. ಹಾಗಾಗಿ ರಾಜ್ಯದ ಮರು ವಿಂಗಡನೆ ನಡೆಸಿ ಅವುಗಳನ್ನು ತನಗೆ ನೀಡಬೇಕು ಎಂದು ಹೇಳಿತ್ತು.

ಆದರೆ ಕೇವಲ ಭಾಷೆಯ ಆಧಾರದಲ್ಲಿ ಮಹಾರಾಷ್ಟ್ರಕ್ಕೆ ಆ ಪ್ರದೇಶಗಳನ್ನು ಸೇರಿಸಲು ಸಾಧ್ಯವಿಲ್ಲ, ಮಹಾರಾಷ್ಟ್ರದ ವಾದವನ್ನು ಒಪ್ಪಲು ಸಾಧ್ಯವಿಲ್ಲ. ಹಾಗಾಗಿ ಅದು ಸಲ್ಲಿಸಿರುವ ಅರ್ಜಿಯನ್ನು ವಜಾಗೊಳಿಸಬೇಕು. ಅಲ್ಲದೆ ಇಂತಹ ದಾವೆಯನ್ನು ಹೂಡಿರುವುದಕ್ಕಾಗಿ ರಾಜ್ಯದ ಮೇಲೆ ದಂಡವನ್ನೂ ಹೇರಬೇಕು ಎಂದು ಕೇಂದ್ರ ಸರಕಾರವು ಸುಪ್ರೀಂ ಕೋರ್ಟ್‌ಗೆ ಕರ್ನಾಟಕ ಪರ ಅಫಿದಾವಿತ್ ಸಲ್ಲಿಸಿತ್ತು.

ಇದೀಗ ಪ್ರಕರಣ ಸುಪ್ರೀಂ ಕೋರ್ಟ್ ವಿಚಾರಣೆಯಲ್ಲಿದೆ. ಕೆಲದಿನಗಳ ಹಿಂದಷ್ಟೇ ವಿಚಾರಣೆಗೆ ಬಂದಿದ್ದ ಸಂದರ್ಭದಲ್ಲಿ ಮಹಾರಾಷ್ಟ್ರ ತನ್ನ ಹಳೆಯ ಅರ್ಜಿಯನ್ನು ತಿದ್ದುಪಡಿ ಮಾಡಲು ಅವಕಾಶ ಕೋರಿತ್ತು. ಅದರಂತೆ ಸುಪ್ರೀಂ ತಿದ್ದುಪಡಿ ಮಾಡುವಂತೆ ಸೂಚನೆ ನೀಡಿದೆ. ಆಗಸ್ಟ್ ಮೊದಲ ವಾರದಲ್ಲಿ ಪ್ರಕರಣ ಮತ್ತೆ ನ್ಯಾಯಾಲಯದ ಮುಂದೆ ಬರಲಿದೆ.
ಸಂಬಂಧಿತ ಮಾಹಿತಿ ಹುಡುಕಿ