ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಈ ವರ್ಷ 224 ರೈತರ ಆತ್ಮಹತ್ಯೆ: ಕರ್ನಾಟಕ ನಂ.2! (Agricultural problems | Suicide | Karnataka)
Bookmark and Share Feedback Print
 
ಈ ವರ್ಷ ಕೃಷಿ ಚಟುವಟಿಕೆಗಳಿಗೆ ಸಂಬಂಧಿಸಿ ಬೇಸತ್ತು ಆತ್ಮಹತ್ಯೆ ಮಾಡಿದ ರೈತರ ಸಂಖ್ಯೆ 224ಕ್ಕೆ ತಲುಪಿದೆ. ಈ ಪೈಕಿ ಮಹಾರಾಷ್ಟ್ರದಲ್ಲಿ ಅತೀ ಹೆಚ್ಚು ರೈತರು ಆತ್ಮಹತ್ಯೆ ಮಾಡಿಕೊಂಡಿದ್ದರೆ, ಕರ್ನಾಟಕ ಎರಡನೇ ಸ್ಥಾನದಲ್ಲಿದೆ!

ಹೌದು. ಕೃಷಿ ಸಚಿವ ಶರದ್ ಪವಾರ್ ಶುಕ್ರವಾರ ರಾಜ್ಯಸಭೆಯಲ್ಲಿ ನೀಡಿದ ಮಾಹಿತಿಯಿದು. ಕರ್ನಾಟಕ, ಆಂಧ್ರಪ್ರದೇಶ, ಮಹಾರಾಷ್ಟ್ರ ಹಾಗೂ ಪಂಜಾಬ್ ರಾಜ್ಯಗಳಲ್ಲಿ ಆತ್ಮಹತ್ಯೆಗೆ ಶರಣಾದ ರೈತರ ಸಂಖ್ಯೆ ಈ ವರ್ಷ 224ಕ್ಕೇರಿದೆ ಎಂದು ಪವಾರ್ ತಿಳಿಸಿದರು.

ಈ ಪೈಕಿ ಮಹಾರಾಷ್ಟ್ರದಲ್ಲಿ 131 ಮಂದಿ ರೈತರು ಆತ್ಮಹತ್ಯೆ ಮಾಡಿಕೊಂಡರೆ ನಮ್ಮ ಕರ್ನಾಟಕದಲ್ಲಿ 81 ರೈತರು ಆತ್ಮಹತ್ಯೆಗೈದಿದ್ದಾರೆ. ಹಾಗಾಗಿ ಮಹಾರಾಷ್ಟ್ರ ರೈತರ ಆತ್ಮಹತ್ಯೆಯಲ್ಲಿ ಮೊದಲ ಸ್ಥಾನದಲ್ಲಿದ್ದರೆ ಕರ್ನಾಟಕ ಎರಡನೇ ಸ್ಥಾನದಲ್ಲಿದೆ. ಆಂಧ್ರಪ್ರದೇಶದಲ್ಲಿ 7 ಮಂದಿ ರೈತರ ಆತ್ಮಹತ್ಯೆಯಾಗಿದ್ದರೆ, ಪಂಜಾಬ್‌ನಲ್ಲಿ ಐದು ರೈತರ ಆತ್ಮಹತ್ಯೆ ಪ್ರಕರಣ ದಾಖಲಾಗಿವೆ.

ಕೃಷಿ ಸಂಬಂಧಿಸಿದ ಕಾರಣಗಳಿಂದಾಗಿಯೇ ಈ ರೈತರು ಆತ್ಮಹತ್ಯೆಗೆ ಶರಣಾದವರು ಎಂದು ಸಚಿವ ಪವಾರ್ ವಿವರಿಸಿದರು.
ಸಂಬಂಧಿತ ಮಾಹಿತಿ ಹುಡುಕಿ