ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಉಗ್ರರ ವಿರುದ್ಧ ಪಾಕಿಸ್ತಾನ ಕ್ರಮ ಕೈಗೊಂಡಿಲ್ಲ: ಭಾರತ (Terror infrastructure | Pakistan | terrorist training camps | Ajay Maken)
Bookmark and Share Feedback Print
 
ಪಾಕಿಸ್ತಾನದಲ್ಲಿನ ಭಯೋತ್ಪಾದನಾ ಮೂಲ ಸೌಕರ್ಯಗಳಿಗೆ ಯಾವುದೇ ಧಕ್ಕೆಯಾಗಿಲ್ಲ ಮತ್ತು ಉಗ್ರ ತರಬೇತಿ ಶಿಬಿರಗಳಲ್ಲಿ ಈಗಲೂ ಕಾರ್ಯಾಚರಣೆಗಳು ಯಥಾವತ್ತಾಗಿ ಮುಂದುವರಿಯುತ್ತಿವೆ ಎಂದು ಕೇಂದ್ರ ಸರಕಾರ ಹೇಳಿದೆ.

ಇತ್ತೀಚಿನ ದ್ವಿಪಕ್ಷೀಯ ಮಾತುಕತೆಗಳು ನಡೆದ ಬಳಿಕವೂ ಪಾಕಿಸ್ತಾನವು ಭಯೋತ್ಪಾದಕರ ವಿರುದ್ಧ ಯಾವುದೇ ಕ್ರಮವನ್ನು ಕೈಗೊಂಡಿಲ್ಲ ಎಂದು ಸರಕಾರ ಹೇಳಿರುವುದರಿಂದ ಪಾಕ್ ಕಡೆಯಿಂದ ತೀಕ್ಷ್ಣ ಪ್ರತಿಕ್ರಿಯೆಗಳು ಬರುವ ನಿರೀಕ್ಷೆಗಳಿವೆ.

ಈ ಬಗ್ಗೆ ಇಂದು ಲೋಕಸಭೆಗೆ ಮಾಹಿತಿ ನೀಡಿದ ಗೃಹಸಚಿವಾಲಯದ ರಾಜ್ಯ ಸಚಿವ ಅಜಯ್ ಮೇಕನ್, ಲಭ್ಯ ಮಾಹಿತಿಗಳ ಪ್ರಕಾರ ಪಾಕಿಸ್ತಾನ ಮತ್ತು ಪಾಕ್ ಆಕ್ರಮಿತ ಕಾಶ್ಮೀರದಲ್ಲಿ ಭಯೋತ್ಪಾದಕರ ತರಬೇತಿ ಶಿಬಿರಗಳು ಮುಂದುವರಿಯುತ್ತಿವೆ ಮತ್ತು ಅವರ ಮೂಲ ಸೌಕರ್ಯಗಳಿಗೆ ಯಾವುದೇ ರೀತಿಯಲ್ಲೂ ಧಕ್ಕೆಯಾಗಿಲ್ಲ ಎಂದರು.

ಪ್ರಶ್ನೆಯೊಂದಕ್ಕೆ ಲಿಖಿತ ಉತ್ತರ ನೀಡಿರುವ ಅವರು, ಇಂತಹ ಶಿಬಿರಗಳಲ್ಲಿ ಭಾರೀ ಸಂಖ್ಯೆಯ ಭಯೋತ್ಪಾದಕರಿಗೆ ತರಬೇತಿ ನೀಡುತ್ತಿರುವ ಬಗ್ಗೆ ವರದಿಗಳು ಬಂದಿವೆ ಎಂದರು.

ಮತ್ತೊಂದು ಪ್ರಶ್ನೆಗೆ ಉತ್ತರಿಸಿರುವ ಮೇಕನ್, ಒಳನುಸುಳುವಿಕೆ ಹೆಚ್ಚಾಗಿಲ್ಲ ಎಂದಿದ್ದಾರೆ.

ಭಾರತ-ಪಾಕಿಸ್ತಾನ ಗಡಿಯುದ್ದಕ್ಕೂ ಈ ವರ್ಷದ ಜೂನ್ ತಿಂಗಳವರೆಗೆ 64 ಮಂದಿಯನ್ನು ದಸ್ತರಿಗಿ ಮಾಡಿದ್ದೇವೆ. ಅದೇ ರೀತಿಯಲ್ಲಿ ಭಾರತ-ಬಾಂಗ್ಲಾದೇಶ ಗಡಿಯಲ್ಲಿ 939 ಮಂದಿಯನ್ನು ಈ ಅವಧಿಯಲ್ಲಿ ಸೆರೆ ಹಿಡಿಯಲಾಗಿದೆ ಎಂದು ಮಾಹಿತಿ ನೀಡಿದರು.

ಇದೇ ಹೊತ್ತಿನಲ್ಲಿ 11 ಒಳನುಸುಳುಕೋರರು ಭಾರತ-ಪಾಕ್ ಗಡಿಯಲ್ಲಿ ಹಾಗೂ 13 ನುಸುಳುಕೋರರು ಭಾರತ-ಬಾಂಗ್ಲಾ ಗಡಿಯಲ್ಲಿ ಭಾರತೀಯ ರಕ್ಷಣಾ ಪಡೆಯ ಗುಂಡಿಗೆ ಬಲಿಯಾಗಿದ್ದಾರೆ ಎಂದು ಸಚಿವರು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ