ಶ್ರೀನಗರದಲ್ಲಿ ಭದ್ರತಾ ಪಡೆಗಳು ಮತ್ತು ಪ್ರತಿಭಟನಾಕಾರರ ನಡುವಿನ ಸಂಘರ್ಷದ ಸಂದರ್ಭದಲ್ಲಿ ಹಾರಿಸಿದ ಗುಂಡೊಂದು ಗುರಿ ತಪ್ಪಿ ಮನೆಯ ಅಂಗಳದಲ್ಲಿ ಆಡುತ್ತಿದ್ದ ಎಂಟರ ಹರೆಯದ ಬಾಲಕನಿಗೆ ತಗುಲಿದ್ದು, ಆತ ಸಾವನ್ನಪ್ಪಿದ್ದಾನೆ. ಇದರೊಂದಿಗೆ ಕಣಿವೆ ರಾಜ್ಯದಲ್ಲಿ ಇತ್ತೀಚಿನ ದಿನಗಳಲ್ಲಿ ಸಾವನ್ನಪ್ಪಿರುವವರ ಸಂಖ್ಯೆ 60ಕ್ಕೆ ಏರಿಕೆಯಾಗಿದೆ.