ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಬಿಜೆಪಿ ನಾಯಕರನ್ನು ಸಿಕ್ಕಿಸಲು ಸಿಬಿಐ ಒತ್ತಡ: ಗೀತಾ ಜೋಹ್ರಿ (Geetha Johri | CBI | Sohrabuddin Sheikh | Gujarat)
Bookmark and Share Feedback Print
 
ಶಂಕಿತ ಉಗ್ರ ಸೊಹ್ರಾಬುದ್ದೀನ್ ಶೇಖ್ ಹತ್ಯಾ ಪ್ರಕರಣದಲ್ಲಿ ಬಿಜೆಪಿ ನಾಯಕ ಅಮಿತ್ ಶಾ ಸೇರಿದಂತೆ ಹಲವು ರಾಜಕೀಯ ನಾಯಕರನ್ನು ದೋಷಾರೋಪಣೆಗೊಳಪಡಿಸಲು ಸಿಬಿಐಯು ಒತ್ತಡ ಹೇರುತ್ತಿದೆ ಎಂದು ಮಹತ್ವದ ಬೆಳವಣಿಗೆಯೊಂದರಲ್ಲಿ ಗುಜರಾತ್‌ನ ಹಿರಿಯ ಐಪಿಎಸ್ ಅಧಿಕಾರಿ ಗೀತಾ ಜೋಹ್ರಿ ಆರೋಪಿಸಿದ್ದಾರೆ.

ಈ ಸಂಬಂಧ ಸುಪ್ರೀಂ ಕೋರ್ಟಿಗೆ ಮನವಿ (curative petition) ಸಲ್ಲಿಸಿರುವ ಜೋಹ್ರಿ, ಪ್ರಕರಣದ ತನಿಖೆಯ ಮೇಲ್ವಿಚಾರಣೆ ನಡೆಸುತ್ತಿರುವ ಸಿಬಿಐ ವಿಶೇಷ ನಿರ್ದೇಶಕ ಬಲ್ವೀಂದರ್ ಸಿಂಗ್ ಇದಕ್ಕೆ ಸಾಕ್ಷಿಯಾಗಿದ್ದು ಅವರನ್ನು ಬದಲಾಯಿಸಬೇಕು ಎಂದಿದ್ದಾರೆ.

2005ರಲ್ಲಿ ಅಹಮದಾಬಾದ್‌ನಲ್ಲಿ ನಡೆದಿದ್ದ ಶೇಖ್ ಎನ್‌ಕೌಂಟರ್ ಸಂಬಂಧ ಈಗಾಗಲೇ ಬಂಧನಕ್ಕೊಳಗಾಗಿರುವ ಮಾಜಿ ಗೃಹಸಚಿವ ಅಮಿತ್ ಶಾ ಸೇರಿದಂತೆ ಇನ್ನಿತರ ಕೆಲವು ರಾಜಕಾರಣಿಗಳನ್ನು ಪ್ರಕರಣದಲ್ಲಿ ಸಿಕ್ಕಿಸಿ ಹಾಕುವಂತೆ ಸಿಬಿಐ ನನ್ನ ಮೇಲೆ ಒತ್ತಡ ಹೇರುತ್ತಿದೆ ಎನ್ನುವುದು ಜೋಹ್ರಿ ಆರೋಪ.

ಈ ಪ್ರಕರಣದ ಕುರಿತು ಗಮನಾರ್ಹ ರೀತಿಯಲ್ಲಿ ಹೇಳಿಕೆ ನೀಡಬೇಕು ಎಂದು ನನಗೆ ಸಿಬಿಐ ಹೇಳುತ್ತಿದೆ ಮತ್ತು ನನ್ನ ವೈಯಕ್ತಿಕ ಕಾರ್ಯದರ್ಶಿಗೂ ಬೆದರಿಕೆ ಹಾಕಲಾಗಿದೆ ಎಂದು ಐಪಿಎಸ್ ಅಧಿಕಾರಿ ಆರೋಪಿಸಿದ್ದಾರೆ.

ಬಲ್ವೀಂದರ್ ಸಿಂಗ್ ಅವರನ್ನು ತನಿಖೆಯ ಮೇಲ್ವಿಚಾರಣೆಯಿಂದ ಯಾವ ಕಾರಣಕ್ಕೆ ಹಿಂದಕ್ಕೆ ಪಡೆಯಬೇಕೆಂಬುದರ ಕುರಿತು ಕಾರಣ ನೀಡಿರುವ ಜೋಹ್ರಿ, ತಾನು 2007ರಲ್ಲಿ ಹೈದರಾಬಾದ್ ಪೊಲೀಸ್ ಆಯುಕ್ತಳಾಗಿದ್ದ ಸಂದರ್ಭದಲ್ಲಿ ಅವರನ್ನು ಪ್ರಕರಣವೊಂದರಲ್ಲಿ ಸ್ವತಃ ವಿಚಾರಣೆ ನಡೆಸಿದ್ದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಈ ಪ್ರಕರಣದಲ್ಲಿ ಬಲ್ವೀಂದರ್ ಸಿಂಗ್ ಅವರನ್ನು ಸಾಕ್ಷಿಯನ್ನಾಗಿ ಪರಿಗಣಿಸಬೇಕು ಎಂದೂ ಜೋಹ್ರಿ ಒತ್ತಾಯಿಸಿದ್ದಾರೆ.

ಈ ಪ್ರಕರಣದಲ್ಲಿ ತನ್ನ ವಿರುದ್ಧದ ವ್ಯತಿರಿಕ್ತ ಆರೋಪಗಳನ್ನು ಬಹಿರಂಗಪಡಿಸದೇ ಇರುವ ನ್ಯಾಯಾಲಯದ ತೀರ್ಮಾನವನ್ನೂ ಜೋಹ್ರಿ ಇದೇ ಕ್ಯೂರೇಟಿವ್ ಮನವಿಯಲ್ಲಿ ಪ್ರಶ್ನಿಸಿದ್ದಾರೆ.

ಗುಜರಾತ್ ಪೊಲೀಸರಿಂದ ಸಿಬಿಐಗೆ ಪ್ರಕರಣ ಹಸ್ತಾಂತರವಾಗುವ ಮೊದಲು ಪ್ರಕರಣದ ತನಿಖೆ ನಡೆಸಿದ್ದ ಜೋಹ್ರಿಯವರ ವಿರುದ್ಧದ ವ್ಯತಿರಿಕ್ತ ಆರೋಪಗಳನ್ನು ಬಹಿರಂಗಪಡಿಸಬೇಕು ಎಂಬ ಮನವಿಯನ್ನು ಸುಪ್ರೀಂ ಕೋರ್ಟ್ ತಿರಸ್ಕರಿಸಿದ ನಂತರ ಇದೀಗ ಕ್ಯೂರೇಟಿವ್ ಅರ್ಜಿ ಸಲ್ಲಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ