ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿ, ಸತತ ನಾಲ್ಕನೇ ಬಾರಿಗೆ ಅಧ್ಯಕ್ಷರಾಗಿ ಅವಿರೋಧವಾಗಿ ಆಯ್ಕೆಯಾಗುವ ಸಾಧ್ಯತೆಗಳಿನೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.
ಕಾಂಗ್ರೆಸ್ ಪಕ್ಷದ ಅಧ್ಯಕ್ಷ ಸ್ಥಾನಕ್ಕೆ ನಾಮಪತ್ರಗಳನ್ನು ಸಲ್ಲಿಸಲು ಸೆಪ್ಟಂಬರ್ 2 ಕೊಪೆಯ ದಿನವಾಗಿದ್ದು, ಹಾಲಿ ಅಧ್ಯಕ್ಷೆ 63 ವರ್ಷ ವಯಸ್ಸಿನ ಸೋನಿಯಾ ಗಾಂಧಿ ಪರವಾಗಿ ಹಲವು ಸೆಟ್‌ಗಳ ನಾಮಪತ್ರಗಳನ್ನು ಸಲ್ಲಿಸುವ ನಿರೀಕ್ಷೆಗಳಿವೆ ಎಂದು ಕಾಂಗ್ರೆಸ್ ವಕ್ತಾರರು ತಿಳಿಸಿದ್ದಾರೆ.
ಜನ್ಮಾಷ್ಠಮಿ ದಿನದಂದು ಅಥವಾ ಒಂದು ದಿನ ಮುಂಚೆ ನಾಮಪತ್ರಗಳನ್ನು ಸಲ್ಲಿಸುವ ಸಾಧ್ಯತೆಗಳಿವೆ. ನಾಮಪತ್ರಕ್ಕೆ ಪ್ರಧಾನಮಂತ್ರಿ ಮನಮೋಹನ್ ಸಿಂಗ್, ವಿತ್ತಸಚಿವ ಪ್ರಣಬ್ ಮುಖರ್ಜಿ ಹಾಗೂ ಸೋನಿಯಾ ಪುತ್ರ ಸಂಸದ ರಾಹುಲ್ ಗಾಂಧಿ ಅನುಮೋದನಾ ಪತ್ರವನ್ನು ನೀಡಲಿದ್ದಾರೆ.
ನಾಮಪತ್ರಗಳನ್ನು ಹಿಂಪಡೆಯಲು ಸೆಪ್ಟೆಂಬರ್ 10 ಅಂತಿಮ ದಿನವಾಗಿದ್ದು, ಸೋನಿಯಾ ಗಾಂಧಿ ಅವಿರೋಧವಾಗಿ ಆಯ್ಕೆಯಾಗಲಿದ್ದಾರೆ ಎನ್ನುವುದು ಸೆಪ್ಟೆಂಬರ್ 2 ರಂದು ಖಚಿತವಾಗಲಿದೆ ಎಂದು ಪಕ್ಷದ ವಕ್ತಾರರು ತಿಳಿಸಿದ್ದಾರೆ.