ಪೊಲೀಸ್ ಅಧಿಕಾರಿಗಳನ್ನು ಅಪಹರಿಸಿದ್ದ ನಕ್ಸಲರು ತಮ್ಮ ಬೇಡಿಕೆಗೆ ಸರಕಾರ ಸ್ಪಂದಿಸದ ಹಿನ್ನೆಲೆಯಲ್ಲಿ, ನಾಲ್ವರು ಪೊಲೀಸರಲ್ಲಿ ಒಬ್ಬ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿದ್ದಾರೆ ಎಂದು ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.
ತಮ್ಮ ಸಹಚರರನ್ನು ಬಿಡುಗಡೆ ಮಾಡಿದಲ್ಲಿ ಮಾತ್ರ, ಒತ್ತೆಯಾಳು ಪೊಲೀಸರನ್ನು ಬಿಡುಗಡೆ ಮಾಡುವುದಾಗಿ ಮಾವೋವಾದಿಗಳು ಸರಕಾರಕ್ಕೆ ಗಡುವು ನೀಡಿದ್ದರು. ಆದರೆ, ನಿಗದಿತ ಗಡುವಿನೊಳಗೆ ಸರಕಾರ ಕ್ರಮ ಕೈಗೊಳ್ಳಿದಿರುವುದರಿಂದ ಒಬ್ಬ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಲಾಗಿದೆ ಎಂದು ಮೂಲಗಳು ತಿಳಿಸಿವೆ.
ಉಳಿದ ಮೂವರು ಅಧಿಕಾರಿಗಳನ್ನು ಒತ್ತೆಯಾಳುಗಳಾಗಿರಿಸಿಕೊಂಡರುವ ಮಾವೋವಾದಿಗಳು, ಮತ್ತೆ ಗಡುವಿನ ಅವಧಿಯನ್ನು ವಿಸ್ತರಿಸಿದ್ದಾರೆ.
ಒತ್ತೆಯಾಳಾಗಿದ್ದ ಅಭಯ್ ಯಾದವ್ ಎನ್ನುವ ಪೊಲೀಸ್ ಅಧಿಕಾರಿಯನ್ನು ಹತ್ಯೆ ಮಾಡಿರುವುದಾಗಿ ಮಾವೋವಾದಿಗಳ ತಂಡದ ವ್ಯಕ್ತಿಯೊಬ್ಬ ಮಾಧ್ಯಮಗಳಿಗೆ ಕರೆ ಮಾಡಿ ವಿವರ ನೀಡಿದ್ದಾನೆ ಎಂದು ಪೊಲೀಸರು ತಿಳಿಸಿದ್ದಾರೆ.
ಪೊಲೀಸ್ ಅಧಿಕಾರಿಯ ಹತ್ಯೆಯ ಸುದ್ದಿ ಬಹಿರಂಗವಾಗುತ್ತಿದ್ದಂತೆ ಮುಖ್ಯಮಂತ್ರಿ ನಿತಿಶ್ ಕುಮಾರ್, ಮೋವಾದಿಗಳೊಂದಿಗೆ ಸರಕಾರ ಮಾತುಕತೆ ನಡೆಸಲು ಸಿದ್ಧವಿದೆ. ಮಾತುಕತೆಗೆ ಆಗಮಿಸುವ ಮಾವೋವಾದಿಗಳ ವಿರುದ್ಧ ಪೊಲೀಸ್ ಕಾರ್ಯಾಚರಣೆ ನಡೆಸುವುದಿಲ್ಲ ಎಂದು ಅಶ್ವಾಸನೆ ನೀಡಿದ್ದಾರೆ.