ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರೈತರಿಗೆ ಸೂಕ್ತ ಪರಿಹಾರ ನೀಡಿ: ಸರಕಾರಕ್ಕೆ ಸೋನಿಯಾ (Farmers | Congress | UPA government | Sonia Gandhi)
Bookmark and Share Feedback Print
 
ಕೈಗಾರಿಕಾ ಉದ್ದೇಶಗಳಿಗಾಗಿ ಜಮೀನು ವಶಪಡಿಸಿಕೊಳ್ಳುವ ಕುರಿತು ಕಾಂಗ್ರೆಸ್ ಮತ್ತು ಯುಪಿಎ ಸರಕಾರದಲ್ಲಿ ತೀವ್ರ ಚರ್ಚೆಗೆ ಆಹಾರವಾಗಿರುವ ಹೊತ್ತಿನಲ್ಲೇ ಪ್ರತಿಕ್ರಿಯೆ ನೀಡಿರುವ ಆಡಳಿತ ಪಕ್ಷದ ಅಧ್ಯಕ್ಷೆ ಸೋನಿಯಾ ಗಾಂಧಿ, ರೈತರಿಗೆ ಸೂಕ್ತ ಪರಿಹಾರ ನೀಡುವುದು ಅಗತ್ಯ ಎಂದು ಹೇಳಿದ್ದಾರೆ.

ಜಮೀನುಗಳನ್ನು ಒತ್ತುವರಿ ಮಾಡಿಕೊಳ್ಳದೆ ನೂತನ ಕೈಗಾರಿಕೆಗಳು ಮತ್ತು ಇತರ ಮೂಲಭೂತ ವ್ಯವಸ್ಥೆಗಳನ್ನು ನಿರ್ಮಿಸುವುದು ಸಾಧ್ಯವಿಲ್ಲ. ಇದು ಸ್ಪಷ್ಟವಾಗಿದೆ ಮತ್ತು ಹೀಗಲ್ಲ ಎಂದು ಯಾರು ಕೂಡ ವಾದಿಸಲಾಗದು ಎಂದಿರುವ ಸೋನಿಯಾ, ಭೂಮಿ ವಶಪಡಿಸಿಕೊಳ್ಳುವ ಸಂದರ್ಭದಲ್ಲಿ ಜಾಗರೂಕತೆ ವಹಿಸಬೇಕು ಎಂದು ಸಲಹೆ ನೀಡಿದ್ದಾರೆ.

ಒತ್ತುವರಿ ಮಾಡಿಕೊಳ್ಳುವ ಸಂದರ್ಭದಲ್ಲಿ ಫಲವತ್ತಾದ ವಿಶಾಲ ಬೃಹತ್ ಜಮೀನು ಮತ್ತು ಕೃಷಿ ಭೂಮಿಗೆ ತೊಂದರೆಯಾಗದ ರೀತಿಯಲ್ಲಿ ಕಾರ್ಯನಿರ್ವಹಿಸಬೇಕು ಎಂದು ಸಾರ್ವಜನಿಕ ಸಭೆಯೊಂದರಲ್ಲಿ ಅಭಿಪ್ರಾಯಪಟ್ಟರು.

ಉತ್ತರ ಪ್ರದೇಶದ ದಾದ್ರಿಯಲ್ಲಿನ ರಾಷ್ಟ್ರೀಯ ಶಾಖೋತ್ಪನ್ನ ವಿದ್ಯುತ್ ಸ್ಥಾವರದ ಎರಡನೇ ಹಂತವನ್ನು ರಾಷ್ಟ್ರಾರ್ಪಣೆ ಮಾಡುತ್ತಾ ಸೋನಿಯಾ ಮಾತನಾಡುತ್ತಿದ್ದರು. ಈ ಸ್ಥಾವರದಿಂದ ಕಾಮನ್‌ವೆಲ್ತ್ ಗೇಮ್ಸ್‌ಗೆ ವಿದ್ಯುತ್ ಪೂರೈಕೆ ಮಾಡಲಾಗುತ್ತದೆ.

ಜಮೀನು ಒತ್ತುವರಿ ಕುರಿತಂತೆ ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿಯಾಗಿ, ಈ ಸಂಬಂಧ ನೂತನ ಕಾನೂನೊಂದನ್ನು ತರುವ ಬಗ್ಗೆ ಕಾಂಗ್ರೆಸ್ ಯುವ ನಾಯಕ ರಾಹುಲ್ ಗಾಂಧಿ ಭರವಸೆಯನ್ನು ಗಿಟ್ಟಿಸಿಕೊಂಡ ನಂತರ ಕಾಂಗ್ರೆಸ್ ಅಧ್ಯಕ್ಷೆ ಇದೀಗ ಮಹತ್ವದ ಹೇಳಿಕೆಯೊಂದನ್ನು ನೀಡಿದ್ದಾರೆ.

ಜಮೀನುಗಳನ್ನು ಒತ್ತುವರಿ ಮಾಡಿಕೊಳ್ಳುವ ಸಂದರ್ಭಗಳಲ್ಲಿ ರೈತರಿಗೆ ಸೂಕ್ತ ಪರಿಹಾರವನ್ನು ನೀಡಬೇಕು ಮತ್ತು ಅವರಿಗೆ ಪರ್ಯಾಯ ವ್ಯವಸ್ಥೆಯನ್ನು ಕಲ್ಪಿಸಬೇಕು ಎಂದು ಅವರು ಕೇಂದ್ರ ಸರಕಾರಕ್ಕೆ ಸಲಹೆ ನೀಡಿದರು.

ಹರ್ಯಾಣದಂತಹ ಕೆಲವು ರಾಜ್ಯಗಳು ಈ ಸಂಬಂಧ ನಿಯಮಾವಳಿಗಳನ್ನು ರೂಪಿಸಿವೆ ಎಂದಿರುವ ಸೋನಿಯಾ, ಇತರ ರಾಜ್ಯಗಳು ಕೂಡ ಇದೇ ನಡೆಯನ್ನು ಅನುಸರಿಸಬೇಕು ಎಂದರು.

ಪರಿಸರ ರಕ್ಷಣೆ ಕುರಿತ ಮಾತುಗಳನ್ನೂ ಇದೇ ಸಂದರ್ಭದಲ್ಲಿ ಕಾಂಗ್ರೆಸ್ ಅಧಿನಾಯಕಿ ಆಡಿದ್ದಾರೆ.

ನಮ್ಮ ರೈತರು, ಕಾರ್ಖಾನೆಗಳು ಮತ್ತು ಕೈಗಾರಿಕೆಗಳಿಗಾಗಿ ನಾವು ಹೆಚ್ಚು ವಿದ್ಯುತ್ ಉತ್ಪಾದಿಸಬೇಕು ಎನ್ನುವುದು ಸ್ಪಷ್ಟ. ಅದೇ ಹೊತ್ತಿಗೆ ನಾವು ಪ್ರಗತಿಯತ್ತ ಸಾಗುತ್ತಿರುವಾಗಲೇ ಪರಿಸರ ರಕ್ಷಣೆ ಕುರಿತು ಕೂಡ ಅಗತ್ಯ ಕ್ರಮಗಳನ್ನು ಕೈಗೊಳ್ಳಬೇಕಾಗಿದೆ ಎಂದರು.
ಸಂಬಂಧಿತ ಮಾಹಿತಿ ಹುಡುಕಿ