30 ಸ್ಥಾನಗಳಿಗೆ ಸ್ಪರ್ಧೆ
ಪಾಟ್ನಾ: ಮುಂಬರುವ ಬಿಹಾರ ವಿಧಾನಸಭಾ ಚುನಾವಣೆಯಲ್ಲಿ ಸಿಪಿಎಂ 30 ಸ್ಥಾನಗಳಲ್ಲಿ ಸ್ಪರ್ಧಿಸಲಿದೆ ಎಂದು ಪಕ್ಷದ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್ ತಿಳಿಸಿದ್ದಾರೆ. ಸಿಪಿಐ ಮತ್ತು ಸಿಪಿಐಎಂಎಲ್ ಜತೆ ಮೈತ್ರಿ ಮಾಡಿಕೊಂಡಿರುವ ಪಕ್ಷವು 243 ಕ್ಷೇತ್ರಗಳಲ್ಲಿ 30 ಸ್ಥಾನಗಳಿಗಾಗಿ ಸ್ಪರ್ಧಿಸಲು ನಿರ್ಧರಿಸಿದೆ ಎಂದು ಕಾರಟ್ ಹೇಳಿದ್ದಾರೆ.