ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಎದೆನೋವು; ಬಂಧಿತ ಗುಜರಾತ್ ಮಾಜಿ ಸಚಿವ ಆಸ್ಪತ್ರೆಗೆ (Ex-Guj minister | Amit Shah | Soharabuddin Sheikh | Narendra Modi)
Bookmark and Share Feedback Print
 
ಶಂಕಿತ ಭಯೋತ್ಪಾದಕ ಸೊಹ್ರಾಬುದ್ದೀನ್ ಶೇಖ್ ಎನ್‌ಕೌಂಟರ್ ಪ್ರಕರಣಕ್ಕೆ ಸಂಬಂಧಪಟ್ಟಂತೆ ಸಿಬಿಐಯಿಂದ ಬಂಧಿಸಲ್ಪಟ್ಟಿರುವ ಗುಜರಾತ್ ಮಾಜಿ ಗೃಹಸಚಿವ ಅಮಿತ್ ಶಾ ಅವರನ್ನು ಅಸೌಖ್ಯದ ಹಿನ್ನೆಲೆಯಲ್ಲಿ ಆಸ್ಪತ್ರೆಗೆ ದಾಖಲಿಸಲಾಗಿದೆ.

ಶಾ ಅವರನ್ನು ನಗರದ ಸರಕಾರಿ ಆಸ್ಪತ್ರೆಯ ಜಿ-6 ವಾರ್ಡ್‌ಗೆ ದಾಖಲು ಮಾಡಲಾಗಿದೆ. ಮೈ ಹುಷಾರಿಲ್ಲ ಎಂದು ಬಿಜೆಪಿ ನಾಯಕ ದೂರಿಕೊಂಡ ಕಾರಣ ಆಸ್ಪತ್ರೆಗೆ ಸೇರಿಸಲಾಯಿತು ಎಂದು ಸಾಬರಮತಿ ಜೈಲು ಅಧಿಕಾರಿಗಳು ತಿಳಿಸಿದ್ದಾರೆ.

ನ್ಯಾಯಾಂಗ ಬಂಧನದ ಅವಧಿ ಮುಕ್ತಾಯವಾದ ಹಿನ್ನೆಲೆಯಲ್ಲಿ ಅವರನ್ನು ಇಂದು ವೀಡಿಯೋ ಕಾನ್ಫರೆನ್ಸ್ ಮೂಲಕ ಸಿಬಿಐ ವಿಶೇಷ ನ್ಯಾಯಾಲಯಕ್ಕೆ ಹಾಜರುಪಡಿಸಬೇಕಿತ್ತು. ಆದರೆ ಅವರು ಅಸೌಖ್ಯದಿಂದಾಗಿ ಆಸ್ಪತ್ರೆಗೆ ದಾಖಲಾಗಿರುವುದರಿಂದ ನ್ಯಾಯಾಲಯಕ್ಕೆ ಹಾಜರುಪಡಿಸಲು ಸಾಧ್ಯವಾಗುತ್ತಿಲ್ಲ ಎಂದು ಸಿಬಿಐಯು, ವಿಶೇಷ ನ್ಯಾಯಾಲಯದ ನ್ಯಾಯಾಧೀಶ ಎ.ವೈ. ದಾವೆ ಅವರಿಗೆ ಮಾಹಿತಿ ನೀಡಿತು.

ಇದನ್ನು ಪರಿಗಣಿಸಿದ ನ್ಯಾಯಮೂರ್ತಿಗಳು, ಶಾ ಅವರ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 29ರವರೆಗೆ ವಿಸ್ತರಿಸಿದ್ದಾರೆ.

ಈ ಹಿಂದೆ ಆಗಸ್ಟ್ 31ರಂದು ಮಾಜಿ ಸಚಿವರು ಎದೆನೋವು ಎಂದು ದೂರಿಕೊಂಡ ಹಿನ್ನೆಲೆಯಲ್ಲಿ ಸರಕಾರಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ನಂತರ ಅವರನ್ನು ಏಳು ದಿನಗಳಲ್ಲಿ ಬಿಡುಗಡೆ ಮಾಡಲಾಗಿತ್ತು.

ಭದ್ರತಾ ಕಾರಣಗಳಿಂದಾಗಿ ಶಾ ಅವರನ್ನು ನ್ಯಾಯಾಲಯಕ್ಕೆ ನೇರ ಹಾಜರುಪಡಿಸುವ ಬದಲು ವೀಡಿಯೋ ಕಾನ್ಫರೆನ್ಸ್ ಮೂಲಕ ಹಾಜರುಪಡಿಸಲು ನ್ಯಾಯಾಲಯವು ವಿಶೇಷ ಅನುಮತಿ ನೀಡಿತ್ತು.

ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿಯವರ ಆಪ್ತನಾಗಿರುವ ಶಾ, 2005ರ ನವೆಂಬರ್ 26ರಂದು ನಡೆದಿದ್ದ ಸೊಹ್ರಾಬುದ್ದೀನ್, ಆತನ ಪತ್ನಿ ಕೌಸರ್ ಬೀ ಮತ್ತು ತುಳಸಿ ಪ್ರಜಾಪತಿಯವರ ಎನ್‌ಕೌಂಟರ್ ಪ್ರಕರಣಗಳಲ್ಲಿ ಪ್ರಮುಖ ಆರೋಪಿ ಎಂದು ಸಿಬಿಐ ಆರೋಪಿಸಿ ಇತ್ತೀಚೆಗಷ್ಟೇ ಬಂಧಿಸಿತ್ತು.
ಸಂಬಂಧಿತ ಮಾಹಿತಿ ಹುಡುಕಿ