ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಉತ್ತರಾಖಂಡ್‌ನಲ್ಲಿ ಭಾರಿ ಮಳೆ; ಅಪಾಯದಲ್ಲಿ ಕನ್ನಡಿಗರು (landslides | Uttarakhand | Rain | Karnataka)
Bookmark and Share Feedback Print
 
ಉತ್ತರಾಖಂಡ್‌ನಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಹಲವೆಡೆ ಪ್ರವಾಹದ ಸ್ಥಿತಿಯುಂಟಾಗಿದ್ದು, ಅಲ್ಮೋರಾ ದೆವ್ಲಿ ಗ್ರಾಮದಲ್ಲಿ ಸಂಭವಿಸಿದ ಭೂ ಕುಸಿತದಲ್ಲಿ 18 ಮಂದಿ ಮೃತಪಟ್ಟಿದ್ದಾರೆ ಎಂದು ವರದಿಗಳು ಹೇಳಿವೆ.

ಒಟ್ಟಾರೆಯಾಗಿ ಇಲ್ಲಿ ಸುರಿಯುತ್ತಿರುವ ಭಾರಿ ಮಳೆಗೆ ಬಲಿಯಾದವರ ಸಂಖ್ಯೆ 30ಕ್ಕೇರಿದೆ ಎಂದು ಅಧಿಕೃತ ವರದಿಗಳು ಹೇಳಿವೆ. ಹಲವೆಡೆ ಭೂಕುಸಿತ ಸಂಭವಿಸಿದ್ದು, ಸಂಚಾರ ವ್ಯವಸ್ಥೆ ಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ.

ಕಳೆದ 24 ಗಂಟೆಯಲ್ಲಿ ಉತ್ತರಾಖಂಡ್‌ನಲ್ಲಿ ದಾಖಲೆಯ 300 ಮಿಲ್ಲಿ ಮೀಟರ್ ಮಳೆ ದಾಖಲಾಗಿದೆ ಎಂದು ಹವಮಾನ ಇಲಾಖೆ ತಿಳಿಸಿದೆ.

ಅಪಾಯದಲ್ಲಿ ಕನ್ನಡಿಗರು...
ಅದೇ ಹೊತ್ತಿಗೆ ಯಾತ್ರೆಗೆ ತೆರಳಿದ್ದ 30 ಕನ್ನಡಿಗರು ಪರದಾಟುವಂತಾಗಿದೆ ಎಂದು ವರದಿಗಳು ಹೇಳಿವೆ. ದಕ್ಷಿಣ ಕನ್ನಡ ಜಿಲ್ಲೆಯ ಬಂಟ್ವಾಳ ತಾಲೂಕಿನ ಯಾತ್ರಿಕರು ಇವರಾಗಿದ್ದಾರೆ ಎಂದು ತಿಳಿದು ಬಂದಿದೆ.

ತಾಜಾ ಸುದ್ದಿಗಳು ತಕ್ಷಣ ಲಭ್ಯವಾಗಲು ಟ್ವಿಟ್ಟರ್‌ನಲ್ಲಿ 'ವೆಬ್‌ದುನಿಯಾ'ವನ್ನು ಫಾಲೋ ಮಾಡಲು ಇಲ್ಲಿ ಕ್ಲಿಕ್ ಮಾಡಿ
ಸಂಬಂಧಿತ ಮಾಹಿತಿ ಹುಡುಕಿ