ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪ್ರಧಾನಿ ಮನಮೋಹನ್‌ಗೆ 78ನೇ ಹುಟ್ಟು ಹಬ್ಬದ ಸಂಭ್ರಮ (Manmohan Singh | Birthday | Pratibha Patil | Sonia Gandhi | Rahul Gandhi)
Bookmark and Share Feedback Print
 
PTI
ಪ್ರಧಾನಿ ಮನಮೋಹನ್ ಸಿಂಗ್‌ ಇಂದು ತಮ್ಮ ನಿವಾಸದಲ್ಲಿ 78ನೇ ವರ್ಷದ ಹುಟ್ಟುಹಬ್ಬವನ್ನು ಸರಳವಾಗಿ ಆಚರಿಸಿಕೊಂಡಿದ್ದಾರೆ.

ರಾಷ್ಟ್ರಾಧ್ಯಕ್ಷೆ ಪ್ರತಿಭಾ ಪಾಟೀಲ್, ಉಪಾಧ್ಯಕ್ಷ ಹಮೀದ್ ಅನ್ಸಾರಿ, ಪ್ರಧಾನಿಯವರ ನಿವಾಸಕ್ಕೆ ಭೇಟಿ ನೀಡಿ ಶುಭಾಷಯಗಳನ್ನು ಕೋರಿದ್ದಾರೆ.
ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ, ಸಂಸದ ಹಾಗೂ ಎಐಸಿಸಿ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಮತ್ತು ಉತ್ತರಪ್ರದೇಶದ ಮುಖ್ಯಮಂತ್ರಿ ಮಾಯಾವತಿ ಹುಟ್ಟು ಹಬ್ಬದ ಸಂದೇಶಗಳನ್ನು ರವಾನಿಸಿದ್ದಾರೆ ಎಂದು ಪ್ರಧಾನಿ ಕಚೇರಿಯ ಅಧಿಕಾರಿಗಳು ತಿಳಿಸಿದ್ದಾರೆ.

ಪ್ರಧಾನಿಯವರ ನಿವಾಸಕ್ಕೆ ಭೇಟಿ ನೀಡಿದ ವಿರೋಧ ಪಕ್ಷದ ನಾಯಕಿ ಸುಷ್ಮಾ ಸ್ವರಾಜ್, ತಮಿಳುನಾಡು ಮುಖ್ಯಮಂತ್ರಿ ಎಂ.ಕರುಣಾನಿಧಿ, ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ ಹಾಗೂ ಸಚಿವರು ಮತ್ತು ಕಾಂಗ್ರೆಸ್ ನಾಯಕರು ಪ್ರಧಾನಿಯವರನ್ನು ಅಭಿನಂದಿಸಿದ್ದಾರೆ.

ಕಳೆದ ವರ್ಷ, ಪ್ರಧಾನಿ ಸಿಂಗ್ ಅಮೆರಿಕದ ಪಿಟ್ಸ್‌ಬರ್ಗ್‌ನಲ್ಲಿ ನಡೆಯುತ್ತಿದ್ದ ಜಿ-20ಶೃಂಗಸಭೆಯಲ್ಲಿ ಪಾಲ್ಗೊಂಡು ವಿಮಾನದಲ್ಲಿ ಮರಳುತ್ತಿರುವಾಗ ಹುಟ್ಟುಹಬ್ಬವನ್ನು ಆಚರಿಸಿಕೊಂಡಿದ್ದರು.

ಪ್ರಧಾನಮಂತ್ರಿ ಮನಮೋಹನ್ ಸಿಂಗ್, ಇದೀಗ ಪಾಕಿಸ್ತಾನದಲ್ಲಿರುವ ಪಶ್ಚಿಮ ಪಂಜಾಬ್‌ನ ಗಹಾ ನಗರದಲ್ಲಿ 1932ರ ಸೆಪ್ಟೆಂಬರ್ 26 ರಂದು ಜನಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ