ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನನ್ನ ಜೀವನದ ಅಮೂಲ್ಯ ಕ್ಷಣವಿದು: ತೀರ್ಪಿಗೆ ಉಮಾ ಭಾರತಿ (Ayodhya verdict | BJP | Uma Bharti | Allahabad High Court)
Bookmark and Share Feedback Print
 
ದೇಗುಲಗಳ ನಗರದ ನಿರ್ದಿಷ್ಟ ಜಾಗದಲ್ಲೇ ರಾಮ ಹುಟ್ಟಿದ್ದು ಎಂಬುವುದು ರುಜುವಾಗಿದೆ ಎಂದಿರುವ ಬಿಜೆಪಿ ಮಾಜಿ ನಾಯಕಿ ಉಮಾ ಭಾರತಿ, ಅಯೋಧ್ಯೆ ಒಡೆತನದ ಕುರಿತು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿರುವ ಕ್ಷಣ ನನ್ನ ಜೀವನದಲ್ಲಿ ಅತ್ಯಂತ ಸಂತಸ ತಂದ ಕ್ಷಣ ಎಂದು ಹೇಳಿದ್ದಾರೆ.

ಅಯೋಧ್ಯೆಯ ವಿವಾದಿತ ಜಾಗದಲ್ಲೇ ರಾಮ ಹುಟ್ಟಿದ್ದು ಎಂಬ ವಾಸ್ತವದ ನಂಬಿಕೆಗೆ ಹೈಕೋರ್ಟ್ ತನ್ನ ತೀರ್ಪಿನ ಮೂಲಕ ದೃಢ ಮುದ್ರೆಯನ್ನು ಒತ್ತಿದ ಕ್ಷಣವು ನನ್ನ ಜೀವನದ ಅಮೂಲ್ಯವಾದ ಕ್ಷಣ ಎಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿದ ನಂತರ ಭಾರತಿ ತಿಳಿಸಿದ್ದಾರೆ.

ತನ್ನ ನಿವಾಸದಲ್ಲಿ ಪತ್ರಕರ್ತರೊಂದಿಗೆ ಮಾತನಾಡುತ್ತಿದ್ದ ಮಧ್ಯಪ್ರದೇಶದ ಮಾಜಿ ಮುಖ್ಯಮಂತ್ರಿ, ರಾಮ ಜನ್ಮಭೂಮಿ ಚಳವಳಿಯ ನಾಯಕತ್ವ ವಹಿಸಿದ್ದ ಅಡ್ವಾಣಿಜೀ ಮತ್ತು ವಿಶ್ವ ಹಿಂದೂ ಪರಿಷತ್ ರಾಮನ ಜನ್ಮಸ್ಥಳದಲ್ಲಿ ಭವ್ಯ ರಾಮಮಂದಿರ ನಿರ್ಮಿಸುವ ನಿಟ್ಟಿನಲ್ಲಿ ಮುಸ್ಲಿಮರ ಜತೆ ಮಾತುಕತೆ ನಡೆಸಲು ಮುಂದಾಗಬೇಕು ಎಂದು ಸಲಹೆ ನೀಡಿದರು.

ಒಂಬತ್ತು ಲಕ್ಷ ವರ್ಷಗಳ ಹಿಂದೆ ರಾಮ ಭೂಮಿಗೆ ಬಂದಿದ್ದ. ಕೇವಲ 500 ವರ್ಷಗಳ ಹಿಂದಷ್ಟೇ ಮೊಘಲ್ ದೊರೆ ಬಾಬರ ಬಂದಿದ್ದ ಎಂದು ಇತಿಹಾಸವನ್ನು ಉಲ್ಲೇಖಿಸಿರುವ 'ಬೆಂಕಿಯ ಚೆಂಡು', ಪ್ರಸಕ್ತ ಬಂದಿರುವ ತೀರ್ಪು ರಾಮ ರಾಷ್ಟ್ರೀಯ ಐಕ್ಯತೆಯ ಮಾದರಿ ಎಂಬುದನ್ನು ತೋರಿಸಿಕೊಟ್ಟಿದೆ ಎಂದರು.

ವಿವಾದಿತ ಸ್ಥಳವನ್ನು ಮೂರು ಸಮಭಾಗಗಳಾಗಿ ವಿಂಗಡಿಸಬೇಕು ಎಂದು ನ್ಯಾಯಾಲಯದ ತೀರ್ಪಿಗೆ ಪ್ರತಿಕ್ರಿಯಿಸಿದ ಅವರು, ತಾನು ತೀರ್ಪಿನ ಪೂರ್ಣ ಪ್ರತಿಯನ್ನು ಗಮನಿಸಿಲ್ಲ; ಹಾಗಾಗಿ ಈ ಕುರಿತು ಪ್ರತಿಕ್ರಿಯೆ ನೀಡುವುದು ಸರಿಯಲ್ಲ ಎಂದರು.

ತನ್ನ ಮಾತೃಪಕ್ಷ ಬಿಜೆಪಿಗೆ ಮರಳುವ ಕುರಿತ ಪ್ರಶ್ನೆಗೆ, ಶೀಘ್ರದಲ್ಲೇ ಮಾಧ್ಯಮಗಳಿಗೆ ಈ ಕುರಿತು ಮಾಹಿತಿ ನೀಡಲಾಗುತ್ತದೆ ಎಂದಷ್ಟೇ ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ