ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಠಾಣೆಯಲ್ಲೇ ಕಾನ್ಸ್‌ಟೇಬಲ್ ಮೇಲೆ ಅತ್ಯಾಚಾರ ಮಾಡಿ ಕೊಲೆ! (Woman constable raped | Rajasthan | murdered | two policemen)
ಪೊಲೀಸ್ ಠಾಣೆಯಲ್ಲಿಯೇ ಮಹಿಳಾ ಪೊಲೀಸ್ ಕಾನ್‌ಸ್ಟೇಬಲ್ ಮೇಲೆ ಇಬ್ಬರು ಪೊಲೀಸರೇ ಅತ್ಯಾಚಾರ ನಡೆಸಿ, ಹತ್ಯೆಗೈದಿರುವ ಆಘಾತಕಾರಿ ಘಟನೆ ರಾಜಸ್ತಾನದ ಕೋಟಾ ಎಂಬಲ್ಲಿ ಶನಿವಾರ ನಡೆದಿದೆ.
ಅತ್ಯಾಚಾರ ಹಾಗೂ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಆರೋಪಿತ ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳನ್ನು ಸೆರೆಹಿಡಿದ ನಂತರ ಅವರನ್ನು ನ್ಯಾಯಾಲಯಕ್ಕೆ ಹಾಜರುಪಡಿಸಲಾಗಿತ್ತು. ಇದೀಗ ಬಂಧಿತ ಆರೋಪಿಗಳಿಗೆ ಕೋರ್ಟ್ ಅಕ್ಟೋಬರ್ 4ರವರೆಗೆ ಪೊಲೀಸ್ ಕಸ್ಟಡಿ ವಿಧಿಸಿದೆ.
ಪೊಲೀಸ್ ಠಾಣೆಯ ಒಳಗಡೆಯೇ ಈ ಇಬ್ಬರೂ ಪೊಲೀಸ್ ಕಾನ್ಸ್‌ಸ್ಟೇಬಲ್‌ಗಳು ಮದ್ಯಪಾನ ಮಾಡಿಕೊಂಡು ಮಹಿಳಾ ಪೇದೆ ಜೊತೆ ಅಸಭ್ಯವಾಗಿ ನಡೆದುಕೊಂಡಿರುವುದಾಗಿ ಅಧಿಕಾರಿಗಳು ತಿಳಿಸಿದ್ದಾರೆ. ಆದರೆ ಈ ಸಂದರ್ಭದಲ್ಲಿ ಮಹಿಳಾ ಪೊಲೀಸ್ ಅವರ ಅಸಭ್ಯ ವರ್ತನೆಗೆ ಛೀಮಾರಿ ಹಾಕಿ ದೂರು ನೀಡುವ ಬೆದರಿಕೆಯನ್ನೂ ಒಡ್ಡಿದ್ದರು. ಆದರೆ ಪಾನಮತ್ತ ಪೊಲೀಸ್ ಪೇದೆಗಳಿಬ್ಬರು ಠಾಣೆಯ ಒಳಗೆ ಆಕೆಯ ಮೇಲೆ ಅತ್ಯಾಚಾರ ನಡೆಸಿ ಕೊಲೆಗೈದಿರುವ ಅಮಾನವೀಯ ಘಟನೆ ನಡೆದಿರುವುದಾಗಿ ಹಿರಿಯ ಪೊಲೀಸ್ ಅಧಿಕಾರಿಗಳು ವಿವರಿಸಿದ್ದಾರೆ.
ಘಟನೆ ಕುರಿತಂತೆ ಎಡಿಜಿ ನೇತೃತ್ವದಲ್ಲಿ ತನಿಖೆ ನಡೆಸಲು ರಾಜ್ಯ ಸರಕಾರ ಆದೇಶ ನೀಡಿದೆ. ಅಲ್ಲದೇ, ಮೃತ ಪೊಲೀಸ್ ಕಾನ್ಸ್‌ಟೇಬಲ್ ಕುಟುಂಬಕ್ಕೆ ಹತ್ತು ಲಕ್ಷ ರೂಪಾಯಿ ಪರಿಹಾರ ನೀಡುವುದಾಗಿ ಸರಕಾರ ಘೋಷಿಸಿದೆ.