ಸಿಮೆಂಟ್ ಹಗರಣದಲ್ಲಿ ಭಾಗಿಯಾಗಿರುವ ಆರೋಪದ ಮೇಲೆ ನ್ಯಾಷನಲ್ ಕಾನ್ಫರೆನ್ಸ್ ಹಿರಿಯ ನಾಯಕ ಮೋಹಿಂದರ್ ಗುಪ್ತಾರನ್ನು ಜಮ್ಮು-ಕಾಶ್ಮೀರ ಪೊಲೀಸರು ಬಂಧಿಸಿದ್ದಾರೆ. ಜಮ್ಮುವಿನಲ್ಲಿ ನಿರ್ಮಾಣವಾಗುತ್ತಿದ್ದ ಶಾಪಿಂಗ್ ಮಾಲ್ ಒಂದಕ್ಕೆ ಸರಕಾರಿ ಸಿಮೆಂಟ್ ಬಳಕೆ ಮಾಡುತ್ತಿದ್ದ ಖಚಿತ ಮಾಹಿತಿ ಹಿನ್ನೆಲೆಯಲ್ಲಿ ಪೊಲೀಸರು ಕ್ರಮಕ್ಕೆ ಮುಂದಾಗಿದ್ದರು.