ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕರ್ನಾಟಕ ಬಿಕ್ಕಟ್ಟು; ಮೊಯ್ಲಿ, ಆಜಾದ್ ಜತೆ ಸೋನಿಯಾ ಚರ್ಚೆ (Karnataka | Congress | Sonia Gandhi | SM Krishna)
Bookmark and Share Feedback Print
 
ಕರ್ನಾಟಕದ ರಾಜಕೀಯ ಪರಿಸ್ಥಿತಿಗಳ ಬಗ್ಗೆ ಕಾಂಗ್ರೆಸ್ ಅಧಿನಾಯಕಿ ಸೋನಿಯಾ ಗಾಂಧಿ ತೀವ್ರವಾಗಿ ತಲೆ ಕೆಡಿಸಿಕೊಂಡಿದ್ದಾರೆ. ಈ ಸಂಬಂಧ ಹಲವರ ಜತೆ ರಾಜಕೀಯ ಬೆಳವಣಿಗೆಗಳ ಬಗ್ಗೆ ಚರ್ಚೆ ನಡೆಸಿದ್ದಾರೆ ಎಂದು ವರದಿಗಳು ಹೇಳಿವೆ.

ಬಿಜೆಪಿ ಆಡಳಿತದ ರಾಜ್ಯದಲ್ಲಿ ರಾಷ್ಟ್ರಪತಿ ಆಡಳಿತಕ್ಕೆ ರಾಜ್ಯಪಾಲ ಎಚ್.ಆರ್. ಭಾರದ್ವಾಜ್ ಶಿಫಾರಸು ಮಾಡಿರುವುದು, ನಂತರ ಎರಡನೇ ಬಾರಿ ವಿಶ್ವಾಸ ಮತ ಸಾಬೀತಿಗೆ ಅವಕಾಶ ನೀಡಿರುವುದು ಮುಂತಾದ ವಿಚಾರಗಳ ಬಗ್ಗೆ ಸೋನಿಯಾ ಮಾಹಿತಿ ಬಯಸಿದ್ದರು.

ಅದರಂತೆ ಕರ್ನಾಟಕ ಕಾಂಗ್ರೆಸ್ ಉಸ್ತುವಾರಿ, ಎಐಸಿಸಿ ಪ್ರಧಾನ ಕಾರ್ಯದರ್ಶಿ ಮತ್ತು ಕೇಂದ್ರದ ಆರೋಗ್ಯ ಸಚಿವರಾಗಿರುವ ಗುಲಾಂ ನಬೀ ಆಜಾದ್ ಹಾಗೂ ಕಾನೂನು ಸಚಿವ ಎಂ. ವೀರಪ್ಪ ಮೊಯ್ಲಿಯವರ ಜತೆ ತನ್ನ ಅಧಿಕೃತ ನಿವಾಸದಲ್ಲಿ ಮಾತುಕತೆ ನಡೆಸಿದರು.

ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ವೀರಪ್ಪ ಮೊಯ್ಲಿ, ಬಿಜೆಪಿಯು ತನ್ನ ತಪ್ಪುಗಳನ್ನು ಮುಚ್ಚಿ ಹಾಕುವ ಸಲುವಾಗಿ ರಾಜ್ಯಪಾಲರತ್ತ ಬೆಟ್ಟು ಮಾಡುತ್ತಿದೆ ಎಂದು ತಿರುಗೇಟು ನೀಡಿದರು.

ಅತ್ತ ಕೇಂದ್ರ ವಿದೇಶಾಂಗ ಸಚಿವ ಎಸ್.ಎಂ. ಕೃಷ್ಣ ಕೂಡ ಕರ್ನಾಟಕದ ರಾಜಕೀಯ ವಿದ್ಯಮಾನಗಳಿಗೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ವಿಶ್ವಾಸ ಮತ ಯಾಚನೆ ಸಂದರ್ಭದಲ್ಲಿ ವಿಧಾನಸಭೆಯಲ್ಲಿ ಏನು ನಡೆದಿದೆಯೋ, ಅದು ರಾಜ್ಯದ ಪಾಲಿಗೆ ಕಪ್ಪು ಚುಕ್ಕೆ. ಇದು ನನಗೆ ತೀವ್ರವಾಗಿ ನೋವು ತಂದಿದೆ, ಅಸಮಾಧಾನವಾಗಿದೆ ಎಂದು ಮಾಜಿ ಮುಖ್ಯಮಂತ್ರಿಯೂ ಆಗಿರುವ ಕೃಷ್ಣ ತಿಳಿಸಿದರು.
ಸಂಬಂಧಿತ ಮಾಹಿತಿ ಹುಡುಕಿ