ಕರುಣಾನಿಧಿಗೆ ಬೆದರಿಕೆ
ಚೆನ್ನೈ: ತಮಿಳುನಾಡು ಮುಖ್ಯಮಂತ್ರಿ ಎಂ. ಕರುಣಾನಿಧಿಯವರನ್ನು ಬಾಂಬ್ ದಾಳಿ ನಡೆಸಿ ಕೊಂದು ಹಾಕುವುದಾಗಿ ಬೆದರಿಕೆ ಹಾಕಿರುವ ಎಸ್ಎಂಎಸ್ ಪೊಲೀಸರಿಗೆ ಬಂದಿದೆ. ರಾಜ್ಯದ ಸಂಚಾರ ನಿಯಂತ್ರಣ ಪೊಲೀಸರಿಗೆ ಇದು ಬಂದಿದ್ದು, ತನಿಖೆ ನಡೆಸಲಾಗುತ್ತಿದೆ ಎಂದು ಉನ್ನತ ಪೊಲೀಸ್ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.