150ಕ್ಕೂ ಹೆಚ್ಚು ಮಂದಿ ಸೆರೆ
ಇಂದೋರ್: ಸೆಕ್ಷನ್ 144 ಜಾರಿಯಿದ್ದ ಹೊರತಾಗಿಯೂ ಪ್ರತಿಭಟನೆ ನಡೆಸಿದ 150ಕ್ಕೂ ಹೆಚ್ಚು ಮಂದಿಯನ್ನು ಮಧ್ಯಪ್ರದೇಶದ ಇಂದೋರ್ ಜಿಲ್ಲಾಡಳಿತವು ಬಂಧಿಸಿದೆ. ಬಂಧಿತರಲ್ಲಿ ಇಬ್ಬರು ಕಾಂಗ್ರೆಸ್ ಶಾಸಕರು ಕೂಡ ಸೇರಿದ್ದಾರೆ. ರೈತರ ಸಮಸ್ಯೆಗಳನ್ನು ಪರಿಹರಿಸುವಂತೆ ಒತ್ತಾಯಿಸಿ ಈ ಪ್ರತಿಭಟನೆ ನಡೆಸಲಾಗಿತ್ತು.