ಇಲ್ಲಿನ ಮುನ್ಸಿಪಲ್ ಕೌನ್ಸಿಲ್‌ನ 19ನೇ ವಾರ್ಡ್‌ಗೆ ಬುಧವಾರ ನಡೆದ ಚುನಾವಣೆಯಲ್ಲಿ ಮಿಜೋರಾಂ ರಾಜ್ಯಪಾಲ ಲೆಫ್ಟಿನೆಂಟ್ ಜನರಲ್ ಎಂ.ಎಂ.ಲಾಖೆರಾ ಅವರು ಮತ ಚಲಾಯಿಸಲು ಸಾಧ್ಯವಾಗಿಲ್ಲ. ಕಾರಣ ಏನಪ್ಪಾ ಅಂದ್ರೆ ಮತದಾರರ ಪಟ್ಟಿಯಲ್ಲಿ ಅವರ ಹೆಸರೇ ಇಲ್ಲವಂತೆ!
ಮತದಾರರ ಪಟ್ಟಿಯಲ್ಲಿ ತಮ್ಮ ಹೆಸರು ಇಲ್ಲದಿರುವುದನ್ನು ಗಮನಿಸಿದ ರಾಜ್ಯಪಾಲರು ಮತ ಚಲಾಯಿಸದೆ ರಾಜಭವನಕ್ಕೆ ವಾಪಸಾಗಿರುವುದಾಗಿ ರಾಜಭವನದ ಅಧಿಕಾರಿಗಳು ತಿಳಿಸಿದ್ದಾರೆ.
ಇಂದು ಮುನ್ಸಿಪಲ್ ಕೌನ್ಸಿಲ್‌ಗೆ ನಡೆದ ಚುನಾವಣೆಯಲ್ಲಿ ಶೇ.60ರಷ್ಟು ಮತದಾನ ಶಾಂತಿಯುತವಾಗಿ ನಡೆದಿರುವುದಾಗಿ ಚುನಾವಣಾಧಿಕಾರಿಗಳು ಹೇಳಿದ್ದಾರೆ. ಈ ಚುನಾವಣೆಯಲ್ಲಿ 45 ಮತದಾರರ ಭವಿಷ್ಯ ಮತಪೆಟ್ಟಿಗೆಯಲ್ಲಿ ಭದ್ರವಾಗಿದೆ. ಈ ಚುನಾವಣೆಯಲ್ಲಿ ಬಿಜೆಪಿ ನಾಲ್ಕು, ಎನ್‌ಸಿಪಿ 1 ಹಾಗೂ ಇಬ್ಬರು ಪಕ್ಷೇತರ ಅಭ್ಯರ್ಥಿಗಳು ತಮ್ಮ ಅದೃಷ್ಟ ಪರೀಕ್ಷೆಗಾಗಿ ಚುನಾವಣಾ ಅಖಾಡಕ್ಕೆ ಇಳಿದಿದ್ದರು.