ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಒಬಾಮಾ ಭೇಟಿ:ಕಣಿವೆಯಾದ್ಯಂತ ಭಾರಿ ಬಿಗಿ ಭದ್ರತೆ (J&K | Obama visit | US President | Omar Abdullah)
Bookmark and Share Feedback Print
 
ಅಮೆರಿಕದ ಅಧ್ಯಕ್ಷ ಬರಾಕ್ ಒಬಾಮಾ ಭಾರತದ ಪ್ರವಾಸದ ಹಿನ್ನೆಲೆಯಲ್ಲಿ, ಯಾವುದೇ ರೀತಿಯ ಉಗ್ರರ ದಾಳಿಯನ್ನು ತಡೆಯಲು ಜಮ್ಮು ಕಾಶ್ಮಿರದಾದ್ಯಂತ ಭಾರಿ ಕಟ್ಟೆಚ್ಚರ ವಹಿಸಲಾಗಿದೆ ಎಂದು ಭಧ್ರತಾ ಪಡೆಗಳ ಅಧಿಕಾರಿಗಳು ಹೇಳಿದ್ದಾರೆ.

ಕಾಶ್ಮಿರ ಕಣಿವೆ ಹಾಗೂ ಇತರ ಉಗ್ರಗಾಮಿ ಪೀಡಿತ ಪ್ರದೇಶಗಳಲ್ಲಿ ಭಾರಿ ಕಟ್ಟೆಚ್ಚರ ವಹಿಸಿಕೊಳ್ಳುವಂತೆ ಭದ್ರತಾ ಪಡೆಗಳಿಗೆ ಆದೇಶ ನೀಡಲಾಗಿದೆ ಎಂದು ಮೂಲಗಳು ತಿಳಿಸಿವೆ.

ಜಮ್ಮು ಖಾಶ್ಮಿರದ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ, ಭದ್ರತಾ ಪಡೆ ಹಾಗೂ ಸಿಆರ್‌ಪಿಎಫ್ ಮತ್ತು ಜಿಲ್ಲಾಡಳಿತದ ಅಧಿಕಾರಿಗಳ ಸಭೆಯನ್ನು ನೆಡೆಸಿ, ಭದ್ರತಾ ವ್ಯವಸ್ಥೆಗಳ ಕುರಿತಂತೆ ವಿವರ ಪಡೆದಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ