ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಹಾರಾಷ್ಟ್ರ ಮುಖ್ಯಮಂತ್ರಿ ಚವಾಣ್ ರಾಜೀನಾಮೆ ಅಂಗೀಕಾರ (Maharashtra chief minister quits | Ashok Chavan resignation | Adarsh housing)
ಆದರ್ಶ ಅಪಾರ್ಟ್‌ಮೆಂಟ್ ಹಗರಣದಲ್ಲಿ ಭಾಗಿಯಾದ ಆರೋಪ ಎದುರಿಸುತ್ತಿರುವ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವಾಣ್ ರಾಜೀನಾಮೆಯನ್ನು ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ಅಂಗೀಕರಿಸಿದ್ದಾರೆ.
ಆದರ್ಶ ಹೌಸಿಂಗ್ ಸೂಸೈಟಿ ಅಪಾರ್ಟ್‌ಮೆಂಟ್ ಹಗರಣದಲ್ಲಿ, ಸಂಬಂಧಿಕರಿಗೆ ಫ್ಲಾಟ್‌ಗಳನ್ನು ನೀಡುವಲ್ಲಿ ಕಾನೂನು ನಿಯಮಗಳನ್ನು ಉಲ್ಲಂಘಿಸಿ ತಮ್ಮ ಪ್ರಭಾವ ಬಳಸಿರುವುದು ಬಹಿರಂಗವಾಗಿದ್ದರಿಂದ, ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡುವಂತೆ ಕಾಂಗ್ರೆಸ್ ಹೈಕಮಾಂಡ್ ಆದೇಶಿಸಿತ್ತು.
ಮೂಲಗಳ ಪ್ರಕಾರ, ಕೇಂದ್ರದ ವಿತ್ತಖಾತೆ ಸಚಿವ ಪ್ರಣಬ್ ಮುಖರ್ಜಿ ಮತ್ತು ರಕ್ಷಣಾ ಖಾತೆ ಸಚಿವ ಎ.ಕೆ.ಅಂಟೋನಿ, ಆದರ್ಶ ಅಪಾರ್ಟ್‌ಮೆಂಟ್‌ನಲ್ಲಿ ನಡೆದ ಅವ್ಯವಹಾರಗಳ ಬಗ್ಗೆ ಹೈಕಮಾಂಡ್‌ಗೆ ಇಂದು ವರದಿಯನ್ನು ಸಲ್ಲಿಸಲಿದ್ದಾರೆ ಎಂದು ತಿಳಿಸಿವೆ.
ವಿರೋಧಪಕ್ಷಗಳು ಸಂಸತ್ತಿನಲ್ಲಿ ಆದರ್ಶ ಅಪಾರ್ಟ್‌ಮೆಂಟ್ ಹಗರಣ ಕುರಿತು ಕೋಲಹಾಲ ಸೃಷ್ಟಿಸುವ ಸಾಧ್ಯತೆಗಳ ಹಿನ್ನೆಲೆಯಲ್ಲಿ, ಮುಜುಗರದಿಂದ ತಪ್ಪಿಸಿಕೊಳ್ಳಲು ಮುಖ್ಯಮಂತ್ರಿ ಚವಾಣ್ ರಾಜೀನಾಮೆಯನ್ನು ಅಂಗೀಕರಿಸಲಾಗಿದೆ ಎಂದು ಮೂಲಗಳು ತಿಳಿಸಿವೆ.