ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಹಾರಾಷ್ಟ್ರ ನೂತನ ಮುಖ್ಯಮಂತ್ರಿಯಾಗಿ ಪೃಥ್ವಿರಾಜ್ ಚವಾಣ್ (Maharastra NEW CM, Prithviraj chavan)
Bookmark and Share Feedback Print
 
PTI
ಆದರ್ಶ್ ಹೌಸಿಂಗ್ ಸೂಸೈಟಿ ಹಗರಣದಲ್ಲಿ ಭಾಗಿಯಾದ ಆರೋಪಗಳಿಂದಾಗಿ ಮುಖ್ಯಮಂತ್ರಿ ಅಶೋಕ್ ಚವೌಣ್ ರಾಜೀನಾಮೆ ನೀಡಿದ ಹಿನ್ನೆಲೆಯಲ್ಲಿ, ಕಾಂಗ್ರೆಸ್ ಹೈಕಮಾಂಡ್ ನೂತನ ಮುಖ್ಯಮಂತ್ರಿಯಾಗಿ ಕೇಂದ್ರ ಸಚಿವ ಪೃಥ್ವಿರಾಜ್ ಚವಾಣ್ ಅವರನ್ನು ಆಯ್ಕೆ ಮಾಡಿ ಆದೇಶ ಹೊರಡಿಸಿದೆ.

ಕಾಂಗ್ರೆಸ್ ಪಕ್ಷದ ಅಧಿನಾಯಕಿ ಸೋನಿಯಾ ಗಾಂಧಿ ನಿವಾಸದಲ್ಲಿ ನಡೆದ ಸಭೆಯಲ್ಲಿ, ಅಂತಿಮವಾಗಿ ಪೃಥ್ವರಾಜ್ ಚವಾಣ್ ಅವರನ್ನು ಮುಖ್ಯಮಂತ್ರಿಯಾಗಿ ಘೋಷಿಸುವ ಅಂತಿಮ ನಿರ್ಧಾರಕ್ಕೆ ಬರಲಾಯಿತು ಎಂದು ಮೂಲಗಳು ತಿಳಿಸಿವೆ.

ನಗರದಲ್ಲಿ ನಡೆದ ಶಾಸಕಾಂಗ ಸಭೆಯಲ್ಲಿ ನೂತನ ಮುಖ್ಯಮಂತ್ರಿಯ ಆಯ್ಕೆಯ ಹೊಣೆಯನ್ನು, ಕಾಂಗ್ರೆಸ್ ಪಕ್ಷದ ರಾಷ್ಟ್ರಾಧ್ಯಕ್ಷೆ ಸೋನಿಯಾ ಗಾಂಧಿಯವರ ತೀರ್ಮಾನಕ್ಕೆ ಬಿಡಲು ನಿರ್ಧರಿಸಲಾಗಿತ್ತು.

ಆದರ್ಶ್ ಅಪಾರ್ಟ್‌ಮೆಂಟ್‌ನಲ್ಲಿ ತಮ್ಮ ಸಂಬಂಧಿಕರಿಗೆ ಫ್ಲ್ಯಾಟ್‌ಗಳನ್ನು ವಿತರಿಸುವಲ್ಲಿ ರಾಜಕೀಯ ಪ್ರಭಾವ ಬಳಸಿ, ಕಾನೂನು ನಿಯಮಗಳನ್ನು ಉಲ್ಲಂಘಿಸಿದ ಆರೋಪಗಳನ್ನು ಮಾಜಿ ಮುಖ್ಯಮಂತ್ರಿ ಅಶೋಕ್ ಚವಾಣ್ ಎದುರಿಸುತ್ತಿದ್ದಾರೆ.

ನೂತನ ಮುಖ್ಯಮಂತ್ರಿ ಸ್ಥಾನಕ್ಕೆ ವಿಖೆ ಪಾಟೀಲ್ ಮತ್ತು ಪೃಥ್ವಿರಾಜ್ ಚವಾಣ್ ಮಧ್ಯೆ ಭಾರಿ ಪೈಪೋಟಿ ಎದುರಾಗಿತ್ತು. ಉಭಯರು ಮರಾಠಿ ಸಮುದಾಯಕ್ಕೆ ಸೇರಿದವರಾಗಿದ್ದರಿಂದ ಸಹಜವಾಗಿ ಹೈಕಮಾಂಡ್ ಗೊಂದಲಕ್ಕೆ ಸಿಲುಕಿತ್ತು.ಆದರೆ, ಅಂತಿಮವಾಗಿ ನೂತನ ಮುಖ್ಯಮಂತ್ರಿಯನ್ನು ಘೋಷಿಸುವಲ್ಲಿ ಯಶಸ್ವಿಯಾಗಿದೆ.

ಪೃಥ್ವಿರಾಜ್ ಚವಾಣ್, ಕರಾಡ್ ಕ್ಷೇತ್ರವನ್ನು ಪ್ರತಿನಿಧಿಸುತ್ತಿದ್ದು, ಮೂರು ಲೋಕಸಭೆ ಚುನಾವಣೆಗಳಲ್ಲಿ ಜಯಗಳಿಸಿ, ಇದೀಗ ಕೇಂದ್ರದಲ್ಲಿ ಸಚಿವರಾಗಿ ಕಾರ್ಯನಿರ್ವಹಿಸುತ್ತಿದ್ದರು.

ನೂತನ ಮುಖ್ಯಮಂತ್ರಿಯಾಗಿ ಪೃಥ್ವಿರಾಜ್ ಚವಾಣ್, ನಾಳೆ ಅಧಿಕಾರ ಸ್ವೀಕರಿಸಲಿದ್ದಾರೆ ಎಂದು ಕಾಂಗ್ರೆಸ್ ಹೈಕಮಾಂಡ್ ಮೂಲಗಳು ತಿಳಿಸಿವೆ.
ಸಂಬಂಧಿತ ಮಾಹಿತಿ ಹುಡುಕಿ