ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » 2ಜಿ ಹಗರಣ: ಕಾಂಗ್ರೆಸ್ ನಾಯಕರಿಂದ ಕರುಣಾ ಭೇಟಿಗೆ ಸಿದ್ಧತೆ (M Karunanidhi | comptroller and auditor general | AIADMK | A Raja)
Bookmark and Share Feedback Print
 
PTI
2ಜಿ ಹಗರಣದಲ್ಲಿ ಸಿಲುಕಿದ ಕೇಂದ್ರ ಟೆಲಿಕಾಂ ಖಾತೆ ಸಚಿವ ಎ.ರಾಜಾ ಸಂಪುಟದಿಂದ ನಿರ್ಗಮಿಸುವ ಕಾಲ ಸನ್ನಿಹಿತವಾದಂತಾಗಿದೆ.

ಸಚಿವ ಎ.ರಾಜಾ ಅವರನ್ನು ಸಂಪುಟದಿಂದ ಕೈ ಬಿಡುವಂತೆ ವಿರೋಧ ಪಕ್ಷಗಳ ಭಾರಿ ಒತ್ತಡವನ್ನು ಎದುರಿಸುತ್ತಿರುವ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷ, ಡಿಎಂಕೆ ವರಿಷ್ಠರಿಗೆ ಸಂದೇಶವನ್ನು ರವಾನಿಸಿ, ಸಚಿವ ರಾಜಾ ಬದಲಿಗೆ ಬೇರೆಯವರಿಗೆ ಅವಕಾಶ ನೀಡುವಂತೆ ಕೋರಿದೆ.

ಕಾಂಗ್ರೆಸ್ ಪಕ್ಷದ ಹಿರಿಯ ಪ್ರತಿನಿಧಿಗಳು, ಮುಖ್ಯಮಂತ್ರಿ ಕರುಣಾನಿಧಿಯವರನ್ನು ಭೇಟಿ ಮಾಡಿ ಕೇಂದ್ರ ಸರಕಾರದ ನಿರ್ಧಾರವನ್ನು ತಿಳಿಸಲಿದ್ದಾರೆ ಎಂದು ಕಾಂಗ್ರೆಸ್ ಪಕ್ಷದ ಮೂಲಗಳು ತಿಳಿಸಿವೆ.

ವಿವಾದಗಳ ಸುಳಿಗೆ ಸಿಲುಕಿದ ಮಹಾರಾಷ್ಟ್ರ ಮುಖ್ಯಮಂತ್ರಿ ಅಶೋಕ್ ಚವಾಣ್ ಹಾಗೂ ಕಾಂಗ್ರೆಸ್ ಸಂಸದೀಯ ಸಮಿತಿಯ ಸದಸ್ಯರಾದ ಸುರೇಶ್ ಕಲ್ಮಾಡಿಯವರ ವಿರುದ್ಧ ಕಠಿಣ ನಿಲುವು ತೆಗೆದುಕೊಂಡ ಕಾಂಗ್ರೆಸ್ ಹೈಕಮಾಂಡ್, ಸಚಿವ ಎ.ರಾಜಾ ವಿರುದ್ಧ ಕ್ರಮ ಕೈಗೊಳ್ಳಲು ಮಿತ್ರ ಪಕ್ಷದ ಗ್ರೀನ್‌ ಸಿಗ್ನಲ್‌ಗಾಗಿ ನಿರೀಕ್ಷಿಸುತ್ತಿದೆ.

ಕೇಂದ್ರದ ಟೆಲಿಕಾಂ ಸಚಿವ ಎ.ರಾಜಾ ಅವರನ್ನು ವಜಾಗೊಳಿಸಿದಲ್ಲಿ, ಕಾಂಗ್ರೆಸ್ ಪಕ್ಷಕ್ಕೆ ಬೆಂಬಲ ನೀಡಲು ಸಿದ್ಧ ಎಂದು ಎಐಎಡಿಎಂಕೆ ಅಧ್ಯಕ್ಷೆ, ಮಾಜಿ ಮುಖ್ಯಮಂತ್ರಿ ಜಯಲಲಿತಾ ಈಗಾಗಲೇ ಘೋಷಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ