ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ದೆಹಲಿ: ಬಹುಮಹಡಿ ಕಟ್ಟಡ ಕುಸಿತಕ್ಕೆ 60ಕ್ಕೂ ಅಧಿಕ ಬಲಿ (Delhi building collapse | killed | Delhi | Laxmi Nagar | police)
Bookmark and Share Feedback Print
 
PTI
ರಾಷ್ಟ್ರರಾಜಧಾನಿಯ ಜನನಿಬಿಡ ಪ್ರದೇಶದ ಲಕ್ಷ್ಮಿ ನಗರದಲ್ಲಿ ಆರು ಅಂತಸ್ತಿನ ಕಟ್ಟಡವೊಂದು ಕುಸಿದು ಬಿದ್ದ ಪರಿಣಾಮ 60ಕ್ಕೂ ಅಧಿಕ ಜನರು ಸಾವನ್ನಪ್ಪಿರುವ ದಾರುಣ ಘಟನೆ ಸೋಮವಾರ ರಾತ್ರಿ ನಡೆದಿದೆ. ಕಟ್ಟಡದ ಅವಶೇಷಗಳ ಅಡಿಯಲ್ಲಿ ಸಿಲುಕಿರುವ ಹಲವರ ಸ್ಥಿತಿ ಚಿಂತಾಜನಕವಾಗಿದ್ದು, ಅವರನ್ನು ಹೊರತೆಗೆಯುವ ಕಾರ್ಯ ಭರದಿಂದ ಸಾಗಿದೆ.

ಘಟನೆಯಲ್ಲಿ 61 ಜನರು ಸಾವನ್ನಪ್ಪಿದ್ದು, 70 ಜನರು ಗಾಯಗೊಂಡಿರುವುದಾಗಿ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ. ಇತ್ತೀಚೆಗಿನ ದಿನಗಳಲ್ಲಿ ನಡೆದ ಅತ್ಯಂತ ಭೀಕರ ದುರಂತ ಇದಾಗಿದೆ. ಅವಶೇಷಗಳ ಅಡಿಯಲ್ಲಿ ಇನ್ನೂ ಅನೇಕ ಶವಗಳು ಇದ್ದು ಅದನ್ನು ಹೊರ ತೆಗೆಯುವ ಕೆಲಸ ನಡೆಯುತ್ತಿದೆ. ಸಾವಿನ ಸಂಖ್ಯೆಯೂ ಹೆಚ್ಚಳವಾಗುವ ಸಾಧ್ಯತೆ ಇದೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ತಿಳಿಸಿದ್ದಾರೆ.

ಇಲ್ಲಿನ ಲಕ್ಷ್ಮಿ ನಗರದ ಲಲಿತಾ ಪಾರ್ಕ್ ಎಂಬಲ್ಲಿ ಸೋಮವಾರ ರಾತ್ರಿ 8.15ರ ಸುಮಾರಿಗೆ ಈ ದುರ್ಘಟನೆ ಸಂಭವಿಸಿದೆ. ಆರು ಅಂತಸ್ತಿನ ಹಳೆಯ ಕಟ್ಟಡ ಈ ಬಾರಿಯ ಮಳೆಗಾಲದಲ್ಲಿ ಸಾಕಷ್ಟು ಶಿಥಿಲಗೊಂಡಿತ್ತು. ಅಷ್ಟೇ ಅಲ್ಲದೆ ಯುಮುನಾ ನದಿಯ ಪ್ರವಾಹದಿಂದಲೂ ಕಟ್ಟಡಕ್ಕೆ ಹಾನಿ ಉಂಟಾಗಿತ್ತು. ಇದರಿಂದಾಗಿಯೇ ಕಟ್ಟಡ ಕುಸಿದು ಬಿದ್ದಿರಬಹುದು ಎಂದು ಶಂಕಿಸಲಾಗಿದೆ.

ದುರ್ಘಟನೆಯಲ್ಲಿ 61 ಜನರು ಸಾವನ್ನಪ್ಪಿರುವುದಾಗಿ ತಿಳಿಸಿರುವ ದೆಹಲಿ ಆರೋಗ್ಯ ಸಚಿವೆ ಕಿರಣ್ ವಾಲಿಯಾ, 29 ಶವಗಳನ್ನು ಲೋಕ್ ನಾಯಕ್ ಜೈ ಪ್ರಕಾಶ್ ನಾರಾಯಣ್ ಆಸ್ಪತ್ರೆ, ಏಳು ಶವ ಲಾಲ್ ಬಹುದ್ದೂರ್ ಶಾಸ್ತ್ರಿ ಆಸ್ಪತ್ರೆ, ಐದು ಹೆಡ್ಗೆವಾರ್ ಆಸ್ಪತ್ರೆ, ಗುರು ತೇಜ್ ಬಹುದ್ದೂರ್ ಆಸ್ಪತ್ರೆಗೆ ಒಂದು ಶವ ಸಾಗಿಸಲಾಗಿದೆ ಎಂದು ವಿವರಿಸಿದ್ದಾರೆ.

ರಕ್ಷಣಾ ಕಾರ್ಯ ಭರದಿಂದ ಸಾಗಿದ್ದು, ಮೃತದೇಹಗಳ ಗುರುತು ಪಚ್ಚೆಹಚ್ಚಲು ಸಂಬಂಧಿಗಳು ಪರದಾಡುತ್ತಿದ್ದರೆ, ಮತ್ತೊಂದೆಡೆ ಅವಶೇಷಗಳ ಅಡಿಯಲ್ಲಿ ಸಿಲುಕಿದವರ ರಕ್ಷಣೆ ಮಾಡುವಂತೆ ಮನವಿ ಮಾಡಿಕೊಳ್ಳುತ್ತಿರುವ ದೃಶ್ಯ ಕರಳು ಹಿಂಡುವಂತಿದೆ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ