ಮೂವರಿಗೆ ಸಿಬಿಐ ಕಸ್ಟಡಿ
ಕಾಮನ್‌ವೆಲ್ತ್ ಗೇಮ್ಸ್ ಸಂಘಟನಾ ಸಮಿತಿಯ ಬಂಧಿತ ಮಾಜಿ ಅಧಿಕಾರಿಗಳಾದ ಟಿ.ಎಸ್. ದರ್ಬಾರಿ, ಸಂಜಯ್ ಮಹೇಂದ್ರೂ ಮತ್ತು ಎಂ. ಜಯಚಂದ್ರನ್ ಅವರನ್ನು ಮೂರು ದಿನಗಳ ಸಿಬಿಐ ಕಸ್ಟಡಿಗೆ ಒಪ್ಪಿಸಲಾಗಿದೆ. ಲಂಡನ್‌ನಲ್ಲಿ ನಡೆದಿದ್ದ ಕ್ವೀನ್ಸ್ ಬ್ಯಾಟನ್ ರಿಲೇಯಲ್ಲಿ ಇವರು ಅವ್ಯವಹಾರ ಎಸಗಿದ್ದಾರೆ ಎಂದು ಆರೋಪಿಸಲಾಗಿತ್ತು.