ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಾಜ್ಯದ ಕಾಂಗ್ರೆಸ್ ನಾಯಕರ ವರ್ತನೆಗೆ ಕರುಣಾನಿಧಿ ಕಿಡಿ (Karunanidhi | Congress | 2G scam)
Bookmark and Share Feedback Print
 
PTI
ಕಾಂಗ್ರೆಸ್ ನಾಯಕರು ಡಿಎಂಕೆ ಪಕ್ಷದ ವಿರುದ್ಧ ಮನಬಂದಂತೆ ವರ್ತಿಸುವುದರಿಂದ ಉಭಯ ಪಕ್ಷಗಳ ಮೈತ್ರಿಗೆ ಅಡ್ಡಿಯಾಗಲಿದೆ. ಇಂತಹ ಹೇಳಿಕೆಗಳನ್ನು ನೀಡದಂತೆ ಹೈಕಮಾಂಡ್, ರಾಜ್ಯದ ನಾಯಕರಿಗೆ ತಿಳಿಹೇಳಬೇಕು ಎಂದು ಡಿಎಂಕೆ ನಾಯಕ ಹಾಗೂ ಮುಖ್ಯಮಂತ್ರಿ ಕರುಣಾನಿಧಿ ಸಲಹೆ ನೀಡಿದ್ದಾರೆ.

ವೆಲ್ಲೂರ್‌ನಲ್ಲಿ ನಡೆದ ಬಹಿರಂಗ ಸಾರ್ವಜನಿಕ ಸಭೆಯಲ್ಲಿ ಮಾತನಾಡಿದ ಅವರು, ಉಭಯ ಪಕ್ಷಗಳ ಮೈತ್ರಿ ಅಂತ್ಯಗೊಳ್ಳುವುದರಿಂದ, ಎರಡು ಪಕ್ಷಗಳಿಗೆ ಹಾನಿಯಾಗಿ ಧಾರ್ಮಿಕ ಮೂಲಭೂತವಾದಿಗಳು ಅಧಿಕಾರಕ್ಕೆ ಬರಲು ಉತ್ತೇಜಿಸಿದಂತಾಗುತ್ತದೆ ಎಂದರು.

ರಾಜ್ಯದ ಕೆಲ ಕಾಂಗ್ರೆಸ್ ನಾಯಕರು ಡಿಎಂಕೆ ಮೈತ್ರಿಯಿಂದ ದೂರವಾಗಲು ಮನಬಂದಂತೆ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ಹೈಕಮಾಂಡ್‌ನ ನಾಯಕರು, ಇಲ್ಲಸಲ್ಲದ ಆರೋಪಗಳನ್ನು ಮಾಡುತ್ತಿರುವ ರಾಜ್ಯದ ಕಾಂಗ್ರೆಸ್ ನಾಯಕರಿಗೆ ಸಲಹೆ ನೀಡಬೇಕು.ಮುಂದಿನ ಚುನಾವಣೆಗಳಲ್ಲಿ ಕೂಡಾ ಎರಡು ಪಕ್ಷಗಳು ಮೈತ್ರಿಯನ್ನು ಮುಂದುವರಿಸಲಿವೆ ಎಂದು ತಿಳಿಸಿದ್ದಾರೆ.

ರಾಜ್ಯ ಸರಕಾರದ ಕಾರ್ಯವೈಖರಿಯನ್ನು ಕೇಂದ್ರ ಸರಕಾರ ಕೊಂಡಾಡಿದೆ. 2ಜಿ ಹಗರಣದಲ್ಲಿ ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಸಂಸತ್ತಿನಲ್ಲಿ ವಿರೋಧ ಪಕ್ಷಗಳು ಕೋಲಾಹಲವೆಬ್ಬಿಸಿದ್ದರಿಂದ ಮಾಜಿ ಟೆಲಿಕಾಂ ಸಚಿವ ಎ.ರಾಜಾ ಅವರಿಗೆ ರಾಜೀನಾಮೆ ನೀಡುವಂತೆ ಆದೇಶಿಸಲಾಯಿತು ಎಂದು ಹೇಳಿದ್ದಾರೆ.
ಸಂಬಂಧಿತ ಮಾಹಿತಿ ಹುಡುಕಿ