ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಪಕ್ಷೇತರರ ಅರ್ಜಿ ತಿದ್ದುಪಡಿ: ತೀರ್ಪು ಕಾಯ್ದಿರಿಸಿದ ಸುಪ್ರೀಂ (DN Jeevaraj | CT Ravi | Independent MLA | Supreme Court)
Bookmark and Share Feedback Print
 
ಅನರ್ಹಗೊಂಡಿರುವ ಪಕ್ಷೇತರ ಶಾಸಕರ ಅರ್ಜಿ ತಿದ್ದುಪಡಿಗೆ ಕರ್ನಾಟಕ ಉಚ್ಚ ನ್ಯಾಯಾಲಯ ಅವಕಾಶ ನೀಡಿರುವುದನ್ನು ಪ್ರಶ್ನಿಸಿರುವ ಅರ್ಜಿಯ ವಿಚಾರಣೆಯನ್ನು ಪೂರ್ಣಗೊಳಿಸಿರುವ ಸರ್ವೋಚ್ಚ ನ್ಯಾಯಾಲಯವು ತೀರ್ಪು ಕಾಯ್ದಿರಿಸಿದೆ.

ಪಿ.ಎಂ. ನರೇಂದ್ರಸ್ವಾಮಿ, ಶಿವರಾಜ್ ತಂಗಡಗಿ, ಗೂಳಿಹಟ್ಟಿ ಶೇಖರ್, ಡಿ. ಸುಧಾಕರ್ ಮತ್ತು ವೆಂಕಟರಮಣಪ್ಪ ಎಂಬ ಅನರ್ಹಗೊಂಡಿರುವ ಐವರು ಪಕ್ಷೇತರ ಶಾಸಕರ ಅರ್ಜಿ ತಿದ್ದುಪಡಿಗೆ ಹೈಕೋರ್ಟ್ ಅವಕಾಶ ನೀಡಿದ್ದಕ್ಕೆ ಬಿಜೆಪಿ ಶಾಸಕರಾದ ಡಿ.ಎನ್. ಜೀವರಾಜ್ ಮತ್ತು ಸಿ.ಟಿ. ರವಿ ಸುಪ್ರೀಂ ಕೋರ್ಟಿನಲ್ಲಿ ಮೇಲ್ಮನವಿ ಸಲ್ಲಿಸಿದ್ದರು.

ಈ ಹಿನ್ನೆಲೆಯಲ್ಲಿ ಹೈಕೋರ್ಟ್ ವಿಚಾರಣೆಗೆ ಸುಪ್ರೀಂ ತಡೆಯಾಜ್ಞೆ ನೀಡಿತ್ತು. ಪ್ರಕರಣ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಅಲ್ತಾಮಸ್ ಕಬೀರ್ ಮತ್ತು ಸಿರಿಯಾಕ್ ಜೋಸೆಫ್ ಅವರನ್ನೊಳಗೊಂಡ ದ್ವಿಸದಸ್ಯ ಪೀಠವು, ವಾದಿ-ಪ್ರತಿವಾದಿಗಳಿಗೆ ನೋಟೀಸ್ ಜಾರಿ ಮಾಡಿ ವಿಚಾರಣೆ ನಡೆಸಿತ್ತು.

ಇಂದು ಈ ಪ್ರಕರಣದ ಅಂತಿಮ ವಿಚಾರಣೆ ನಡೆಸಿದ ಪೀಠವು, ತೀರ್ಪನ್ನು ಕಾಯ್ದಿರಿಸಿತು. ಈ ತೀರ್ಪು ಬಂದ ನಂತರವಷ್ಟೇ ಹೈಕೋರ್ಟಿನಲ್ಲಿ ಪಕ್ಷೇತರ ಶಾಸಕರ ಅರ್ಜಿಯ ವಿಚಾರಣೆ ಮುಂದುವರಿಯುತ್ತದೆ.

ಪ್ರಕರಣದ ಹಿನ್ನೆಲೆ...
ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ನೇತೃತ್ವದ ಬಿಜೆಪಿ ಸರಕಾರದಿಂದ ಐವರು ಪಕ್ಷೇತರ ಶಾಸಕರು ಬೆಂಬಲ ಹಿಂದಕ್ಕೆ ಪಡೆದುಕೊಂಡಿರುವ ಪತ್ರವನ್ನು ರಾಜ್ಯಪಾಲರಿಗೆ ಸಲ್ಲಿಸಿದ್ದರು. ಇದನ್ನು ಗಂಭೀರವಾಗಿ ಪರಿಗಣಿಸಿದ ವಿಧಾನಸಭಾ ಸ್ಪೀಕರ್ ಕೆ.ಜಿ. ಬೋಪಯ್ಯ ಪಕ್ಷೇತರ ಶಾಸಕರನ್ನು ಅನರ್ಹಗೊಳಿಸಿದ್ದರು.

ಪ್ರಕರಣ ಹೈಕೋರ್ಟ್ ಮೆಟ್ಟಿಲೇರಿತ್ತು. ಈ ಸಂದರ್ಭದಲ್ಲಿ ತಮ್ಮ ಅರ್ಜಿಯಲ್ಲಿ ಅನರ್ಹಗೊಂಡ ಪಕ್ಷೇತರ ಶಾಸಕರು, 'ಬಿಜೆಪಿ ತೊರೆದಿಲ್ಲ' ಎಂದು ನಮೂದಿಸಿದ್ದರು. ಇದೇ ಅವರ ಪಾಲಿಗೆ ಕಂಟಕವಾಗುವುದನ್ನು ಗಮನಿಸಿ, ಅರ್ಜಿ ತಿದ್ದುಪಡಿಗೆ ಅವಕಾಶ ಕೋರಿದ್ದರು. ಹೈಕೋರ್ಟ್ ಇದಕ್ಕೆ ಒಪ್ಪಿಗೆ ನೀಡಿತ್ತು. ಅದರಂತೆ 'ಎಂದೂ ಬಿಜೆಪಿ ಸೇರಿಲ್ಲ' ಎಂದು ಬದಲಾವಣೆ ಮಾಡಲಾಗಿತ್ತು.

ಇದರ ವಿರುದ್ಧ ಬಿಜೆಪಿ ಶಾಸಕರು ಸುಪ್ರೀಂ ಕೋರ್ಟಿಗೆ ಹೋಗಿದ್ದರು. ಅರ್ಜಿಯ ತಿದ್ದುಪಡಿಗೆ ಅವಕಾಶ ನೀಡಿರುವುದು ಸರಿಯಲ್ಲ. ತಿದ್ದುಪಡಿಗೆ ಅವಕಾಶ ನೀಡಿರುವುದರಿಂದ ಅರ್ಜಿಯ ಮೂಲ ಸ್ವರೂಪವೇ ಬದಲಾಗುತ್ತದೆ ಎಂದು ಸರಕಾರಿ ವಕೀಲರು ವಾದಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ