ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಅಯೋಧ್ಯೆ ತೀರ್ಪು: ಹಿಂದೂ ಮಹಾಸಭಾದಿಂದ ಆಕ್ಷೇಪಣಾ ಅರ್ಜಿ (Hindu Mahasabha | Allahabad High Court | Ram Janmabhoomi | Babri Masjid)
Bookmark and Share Feedback Print
 
ರಾಮ ಜನ್ಮಭೂಮಿ-ಬಾಬರಿ ಮಸೀದಿ ಅಯೋಧ್ಯೆ ಒಡೆತನ ವಿವಾದಕ್ಕೆ ಸಂಬಂಧಿಸಿ, ಸೆ.30ರಂದು ಅಲಹಾಬಾದ್ ಹೈಕೋರ್ಟ್ ನೀಡಿರುವ ತೀರ್ಪಿಗೆ ಹಿಂದೂ
WD
WD
ಮಹಾಸಭಾ ಆಕ್ಷೇಪಣಾ ಅರ್ಜಿ ಸಲ್ಲಿಸಿದೆ. ತೀರ್ಪನ್ನು ಮರು ಪರಿಶೀಲನೆ ಮಾಡಿಕೊಳ್ಳಬೇಕೆಂದು ಮನವಿ ಮಾಡಲಾಗಿದೆ.


ಕ್ಷಣ ಕ್ಷಣದ ತಾಜಾ ಸುದ್ದಿಗಳಿಗೆ, ವಿಶೇಷ ಸುದ್ದಿಗಳಿಗೆ ನಿಮ್ಮ ವೆಬ್‌ದುನಿಯಾಕ್ಕೆ ಭೇಟಿ ಕೊಡಿ

ಸುದ್ದಿಗಾರರೊಂದಿಗೆ ಮಾತನಾಡಿದ ಹಿಂದೂ ಮಹಾಸಭಾ ಪರ ವಕೀಲ ಎಚ್‌.ಎಸ್. ಜೈನ್ , ಅಲಹಾಬಾದ್ ಉಚ್ಚ ನ್ಯಾಯಾಲಯದ ಲಕ್ನೋ ಪೀಠದಲ್ಲಿ ಡಿ.6ರಂದು ಆಕ್ಷೇಪಣಾ ಅರ್ಜಿ ಸಲ್ಲಿಸಲಾಗಿದೆ ಎಂದರು. ಈ ಅರ್ಜಿ ಡಿ.10ರೊಳಗೆ ವಿಚಾರಣೆಗೆ ಬರಲಿದೆ.

ಹಿಂದೂಗಳ ಶ್ರದ್ಧಾಕೇಂದ್ರ ಅಯೋಧ್ಯೆಯ ಶ್ರೀರಾಮ ಜನ್ಮಭೂಮಿಯ ಒಡೆತನದ ಕುರಿತು ಇದೇ ವರ್ಷದ ಸೆಪ್ಟೆಂಬರ್ 30ರಂದು ಅಲಹಾಬಾದ್ ಹೈಕೋರ್ಟ್ ತೀರ್ಪು ನೀಡಿತ್ತು. ಅಯೋಧ್ಯೆಯನ್ನು ಮೂರು ವಿಭಾಗಗಳನ್ನಾಗಿ ಮಾಡಿದ್ದ ನ್ಯಾಯಾಲಯವು, ಹಿಂದೂ ಮತ್ತು ಮುಸ್ಲಿಮರಿಗೆ ಹಂಚಿಕೆ ಮಾಡಿತ್ತು. ಅಲ್ಲದೆ ಪ್ರಸಕ್ತ ಇರುವ ತಾತ್ಕಾಲಿಕ ರಾಮಮಂದಿರವನ್ನು ಸ್ಥಳಾಂತರಗೊಳಿಸಬಾರದು ಎಂದೂ ತೀರ್ಪಿನಲ್ಲಿ ಹೇಳಿತ್ತು.

ನ್ಯಾಯಮೂರ್ತಿಗಳಾದ ಎಸ್.ಯು. ಖಾನ್, ಸುಧೀರ್ ಅಗರ್ವಾಲ್ ಮತ್ತು ಡಿ.ವಿ. ಶರ್ಮಾ ಈ ತೀರ್ಪನ್ನು ನೀಡಿದ್ದರು.

ತೀರ್ಪಿನ ಕುರಿತು ಯಾರಿಗಾದರೂ ಅಸಮಾಧಾನಗಳಿದ್ದರೆ ತಮ್ಮ ಮನವಿಯನ್ನು ಸಲ್ಲಿಸಬೇಕು ಎಂದು ನ್ಯಾಯಾಲಯ ಹೇಳಿರುವ ಹಿನ್ನೆಲೆಯಲ್ಲಿ ಬಹುತೇಕ ವಾದಿಗಳು ಆಕ್ಷೇಪಣಾ ಅರ್ಜಿಗಳನ್ನು ಸಲ್ಲಿಸಿದ್ದಾರೆ.

ತೀರ್ಪು ಆಕ್ಷೇಪಕಾರಿಯಾಗಿರುವುದರಿಂದ ಮತ್ತು ತುಂಬಾ ಹಳೆಯ ಪ್ರಕರಣವಾಗಿರುವುದರಿಂದ ನ್ಯಾಯದ ಹಿತಾಸಕ್ತಿ ದೃಷ್ಟಿಯಿಂದ ಮರು ಪರಿಶೀಲನೆ ನಡೆಸಬೇಕು ಎಂದು ಎಂ. ಇಸ್ಮಾಯಿಲ್ ಫಾರೂಕಿ ಎಂಬವರು ಅರ್ಜಿ ಸಲ್ಲಿಸಿದ್ದರು.
ಸಂಬಂಧಿತ ಮಾಹಿತಿ ಹುಡುಕಿ