ಪರಿಹಾರಕ್ಕೆ ಕಾರಟ್ ಒತ್ತಾಯ
ಮಳೆಯಿಂದ ನಷ್ಟಕ್ಕೊಳಗಾದ ರೈತರಿಗೆ ಹೆಚ್ಚಿನ ಪರಿಹಾರ ಒದಗಿಸಬೇಕು ಎಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಟಿಡಿಪಿ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಶನಿವಾರ ಭೇಟಿ ಮಾಡಿರುವ ಸಿಪಿಐಎಂ ಪ್ರಧಾನ ಕಾರ್ಯದರ್ಶಿ ಪ್ರಕಾಶ್ ಕಾರಟ್, ಸರಕಾರವು ತಕ್ಷಣ ಕಾರ್ಯ ಪ್ರವೃತ್ತಗೊಳ್ಳಬೇಕು ಎಂದು ಒತ್ತಾಯಿಸಿದರು.