ನಾಯ್ಡು ಬಂಧನಕ್ಕೆ ಖಂಡನೆ
ರೈತರಿಗೆ ಪರಿಹಾರ ಹೆಚ್ಚಿಸಬೇಕೆಂದು ಒತ್ತಾಯಿಸಿ ಉಪವಾಸ ಸತ್ಯಾಗ್ರಹ ನಡೆಸುತ್ತಿದ್ದ ತೆಲುಗು ದೇಶಂ ಪಕ್ಷದ ಅಧ್ಯಕ್ಷ ಎನ್. ಚಂದ್ರಬಾಬು ನಾಯ್ಡು ಅವರನ್ನು ಆಂಧ್ರಪ್ರದೇಶ ಸರಕಾರವು ಬಂಧಿಸಿರುವ ಕ್ರಮವನ್ನು ಬಿಜೆಪಿ ರಾಜ್ಯ ಘಟಕ ತೀವ್ರವಾಗಿ ಖಂಡಿಸಿದೆ. ಪರಿಹಾರ ಹೆಚ್ಚಳಗೊಳಿಸುವ ಬದಲು ಕಾಂಗ್ರೆಸ್ ಸರಕಾರವು ದೌರ್ಜನ್ಯ ನಡೆಸುತ್ತಿದೆ ಎಂದು ಬಿಜೆಪಿ ಆರೋಪಿಸಿದೆ.