ಪಶ್ಚಿಮ ಬಂಗಾಳದಲ್ಲಿ ಹೆಚ್ಚುತ್ತಿರುವ ಹಿಂಸಾಚಾರದಿಂದ ಕಳವಳಗೊಂಡಿರುವ ಕೇಂದ್ರದ ಗೃಹ ಸಚಿವ ಪಿ.ಚಿದಂಬರಂ, ಮುಖ್ಯಮಂತ್ರಿ ಬುದ್ದದೇವ್ ಭಟ್ಟಾಚಾರ್ಯ ಅವರಿಗೆ ಪತ್ರ ಬರೆದು ಪ್ರಜಾಪ್ರಭುತ್ವದಲ್ಲಿ ಹಿಂಸಾಚಾರಕ್ಕೆ ಅವಕಾಶವಿಲ್ಲ. ಕೂಡಲೇ ಹಿಂಸಾಚಾರ ತಡೆಗೆ ಸೂಕ್ತ ಕ್ರಮ ತೆಗೆದುಕೊಳ್ಳುವಂತೆ ಕೋರಿದ್ದಾರೆ.
ಪಶ್ಚಿಮ ಬಂಗಾಳದಲ್ಲಿ ಕೆಲ ದಿನಗಳ ಹಿಂದೆ ನಡೆದ ಹಿಂಸಾಚಾರಗಳಿಂದಾಗಿ, ಉದ್ರಿಕ್ತ ವಾತಾವರಣ ತಲೆದೋರಿತ್ತು.ರಾಜ್ಯ ಸರಕಾರ ಕೂಡಲೇ ಹಿಂಸಾಚಾರ ತಡೆಗೆ ಕಠಿಣ ಕ್ರಮಗಳನ್ನು ತೆಗೆದುಕೊಳ್ಳುವಂತೆ ಚಿದಂಬರಂ ತಾಕೀತು ಮಾಡಿದ್ದಾರೆ.
ಏತನ್ಮಧ್ಯೆ, ಕೇಂದ್ರದ ಗೃಹ ಸಚಿವ ಪಿ.ಚಿದಂಬರಂ ಅವರಿಂದ ಯಾವುದೇ ಪತ್ರ ಬಂದಿಲ್ಲವೆಂದು ಮುಖ್ಯಮಂತ್ರಿ ಕಚೇರಿಯ ಅಧಿಕಾರಿಗಳು ಸ್ಪಷ್ಟಪಡಿಸಿದ್ದಾರೆ.
ತೃಣಮೂಲ ಕಾಂಗ್ರೆಸ್ ನಾಯಕರು ಪ್ರಧಾನಿಯವರನ್ನು ನವದೆಹಲಿಯಲ್ಲಿ ಭೇಟಿ ಮಾಡಿ, ಅಗತ್ಯ ವಸ್ತುಗಳ ದರ ಏರಿಕೆ ಮತ್ತು ಪಶ್ಚಿಮ ಬಂಗಾಳದಲ್ಲಿ ನಡೆಯುತ್ತಿರುವ ಹಿಂಸಾಚಾರಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ ಎಂದು ಮೂಲಗಳು ತಿಳಿಸಿವೆ.