ಮಹಾರಾಷ್ಟ್ರಕ್ಕೆ 400 ಕೋಟಿ
ನವದೆಹಲಿ: ಮಹಾರಾಷ್ಟ್ರದಲ್ಲಿ ಅನಾವೃಷ್ಟಿ ಮತ್ತು ಅಕಾಲಿಕ ಮಳೆಯಿಂದಾಗಿ ಅಪಾರ ಪ್ರಮಾಣದ ಬೆಳೆ ಹಾನಿಗೀಡಾಗಿದ್ದು, ನಷ್ಟಕ್ಕೊಳಗಾದ ರೈತರಿಗೆ ಕೇಂದ್ರ ಸರಕಾರವು 400 ಕೋಟಿ ರೂಪಾಯಿಗಳ ಪರಿಹಾರ ಘೋಷಿಸಿದೆ. ಮಹಾರಾಷ್ಟ್ರ ಮುಖ್ಯಮಂತ್ರಿ ನೇತೃತ್ವದ ನಿಯೋಗವು ಪ್ರಧಾನ ಮಂತ್ರಿ ಮನಮೋಹನ್ ಸಿಂಗ್ ಅವರನ್ನು ಭೇಟಿ ಮಾಡಿದ ನಂತರ ಈ ಬೆಳವಣಿಗೆ ನಡೆದಿದೆ.