ಪ್ರತ್ಯೇಕ ತೆಲಂಗಾಣ ರಾಜ್ಯ ರಚನೆಯನ್ನು ಹೊರತುಪಡಿಸಿ ಏನನ್ನೂ ಒಪ್ಪಿಕೊಳ್ಳುವುದಿಲ್ಲ ಎಂದು ತೆಲಂಗಾಣ ರಾಷ್ಟ್ರೀಯ ಸಮಿತಿಯ ಅಧ್ಯಕ್ಷ ಕೆ.ಚಂದ್ರಶೇಖರ್ ರಾವ್ ಹೇಳಿದ್ದಾರೆ.
ಶ್ರೀ ಕೃಷ್ಣ ಸಮಿತಿ ನೀಡಿರುವ ವರದಿಯ ಕುರಿತಂತೆ ಚರ್ಚಿಸಲು ಕೇಂದ್ರ ಸರಕಾರ ಜ.6 ರಂದು ಪ್ರಮುಖ ಎಂಟು ಪಕ್ಷಗಳಿಗೆ ಅಹ್ವಾನ ನೀಡಿದ ಹಿನ್ನೆಲೆಯಲ್ಲಿ, ರಾಜಕೀಯ ಪೂರ್ವಭಾವಿ ಸಭೆಗೆ ಮುನ್ನ ಟಿಆರ್‌ಎಸ್ ಮುಖ್ಯಸ್ಥರು ತಮ್ಮ ನಿಲುವನ್ನು ಸ್ಪಷ್ಟಪಡಿಸಿದ್ದಾರೆ.
ಪ್ರತ್ಯೇಕ ತೆಲಂಗಾಣ ರಾಜ್ಯ ಹೊರತುಪಡಿಸಿ, ಇತರ ಯಾವುದೇ ಪ್ರಸ್ತಾವನೆಗಳಿಗೆ ಸಮ್ಮತಿಸುವುದಿಲ್ಲ ಎಂದು ಪ್ರಧಾನಿ ಮನಮೋಹನ್ ಸಿಂಗ್ ಅವರಿಗೆ ಸ್ಪಷ್ಟಪಡಿಸಿರುವುದಾಗಿ ತಿಳಿಸಿದ್ದಾರೆ.
ಯುಪಿಎ ಸರಕಾರ ಪ್ರತ್ಯೇಕ ತೆಲಂಗಾಣ ರಚನೆಗೆ ಕ್ರಮ ಕೈಗೊಳ್ಳದಿದ್ದಲ್ಲಿ, ಆಂಧ್ರ ಪ್ರದೇಶದ ಪ್ರಮುಖ ಪಕ್ಷಗಳಾದ ಕಾಂಗ್ರೆಸ್,ಟಿಡಿಪಿ ಶಾಸಕರು, ಪ್ರಜಾಪ್ರತಿನಿಧಿಗಳು ರಾಜೀನಾಮೆ ನೀಡಿ ಕೇಂದ್ರ ಸರಕಾರದ ಮೇಲೆ ಒತ್ತಡ ಹೇರಲು ನಿರ್ಧರಿಸಿವೆ ಎಂದು ವಿವರಣೆ ನೀಡಿದ್ದಾರೆ.
ತೆಲಂಗಾಣ ರಾಜ್ಯ ರಚನೆಗೆ ಸಂಬಂಧಿಸಿದಂತೆ ಕೇಂದ್ರ ಸರಕಾರ ಸಂಸತ್‌ನಲ್ಲಿ ಅಶ್ವಾಸನೆ ನೀಡಿದೆ. ಈ ಭರವಸೆ ಜಾರಿಯಾಗದಿದ್ದಲ್ಲಿ ಪ್ರಜಾಪ್ರಭುತ್ವಕ್ಕೆ ಅರ್ಥವಿರುವುದಿಲ್ಲ ಎಂದು ಟಿಆರ್‌ಎಸ್ ಮುಖ್ಯಸ್ಥ ಕೆ.ಎಸ್.ಚಂದ್ರಶೇಖರ್ ಗುಡುಗಿದ್ದಾರೆ.