ಐವರು ಉಗ್ರರು ತಪ್ಪಿತಸ್ಥರು
ದೇಶದ ವಿರುದ್ಧ ಯುದ್ಧ ಸಾರಿದ ಆರೋಪದಲ್ಲಿ ಹಲವು ಭಯೋತ್ಪಾದನಾ ಚಟುವಟಿಕೆಗಳಲ್ಲಿ ಪಾಲ್ಗೊಂಡಿದ್ದ ಐವರು ಭಯೋತ್ಪಾದಕರು ತಪ್ಪಿತಸ್ಥರು ಎಂದು ದೆಹಲಿಯ ನ್ಯಾಯಾಲಯವೊಂದು ತೀರ್ಪು ನೀಡಿದೆ. ಇವರನ್ನು ಪೋಟಾ ಅಡಿಯಲ್ಲಿ ವಿಚಾರಣೆ ನಡೆಸಲಾಗಿತ್ತು. ಶಿಕ್ಷೆಯನ್ನು ಇನ್ನಷ್ಟೇ ಪ್ರಕಟಿಸಬೇಕಿದೆ.