ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಹಿಂಸಾಚಾರ ದೃಶ್ಯ ಪ್ರಸಾರ; ತೆಲುಗು ಚಾನೆಲ್‌ಗೆ ನೋಟಿಸ್ (Telangana | Kochi | Police | Hyderabad)
Bookmark and Share Feedback Print
 
ತೆಲಂಗಾಣ ಪ್ರತ್ಯೇಕ ರಾಜ್ಯಕ್ಕೆ ಆಗ್ರಹಿಸಿ ಉಸ್ಮಾನಿಯಾ ವಿಶ್ವ ವಿದ್ಯಾಲಯದಲ್ಲಿ ನಡೆಸಿದ ಹಿಂಸಾಚಾರ ದೃಶ್ಯಗಳನ್ನು ಪ್ರಸಾರ ನಡೆಸಿರುವುದುಕ್ಕೆ ಸಂಬಂಧಿಸಿದಂತೆ ತೆಲುಗು ಟಿ.ವಿ ಚಾನೆಲ್‌ವೊಂದಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.

ಪ್ರತ್ಯೇಕ ತೆಲಂಗಾಣ ರಾಜ್ಯಕ್ಕಾಗಿ ನಡೆಯುತ್ತಿರುವ ಹಿಂಸಾತ್ಮಾಕ ಪ್ರತಿಭಟನೆಯನ್ನು ಪ್ರಸಾರ ಮಾಡದಂತೆ ಮಾಧ್ಯಮಗಳ ಮೇಲೆ ಸರ್ಕಾರ ನಿರ್ಬಂಧ ಹೇರಿತ್ತು. ಆದರೆ ವೀಡಿಯೋ ತುಣುಕುಗಳನ್ನು ಪ್ರಸಾರ ಮಾಡುವ ಮೂಲಕ ಹಿಂಸಾಚಾರಕ್ಕೆ ಪ್ರಚೋದನೆ ನೀಡಲಾಗುತ್ತಿದೆ ಎಂದು ಆಪಾದಿಸಿ ಪೊಲೀಸರು ನೋಟಿಸ್ ಜಾರಿ ಮಾಡಿದೆ.

ಎಲ್ಲ ಚಾನೆಲ್‌ಗಳ ಪ್ರಸರಣಗಳ ಮೇಲೆ ತೀವ್ರ ಇರಿಸುತ್ತಿರುವ ಪೊಲೀಸರು ಒಂದು ವೇಳೆ ನಿಯಮ ಉಲ್ಲಂಘಿಸಿರುವುದು ಕಂಡುಬಂದಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗುತ್ತದೆ ಎಂದು ಎಚ್ಚರಿಕೆ ನೀಡಿದೆ.

ರಾಜ್ ನ್ಯೂಸ್ ಚಾನೆಲ್‌ನಲ್ಲಿ ಪ್ರತ್ಯೇಕ ತೆಲಂಗಾಣಕ್ಕಾಗಿ ಒತ್ತಾಯಿಸಿ ಪ್ರತಿಭಟನೆ ಮಾಡುತ್ತಿದ್ದ ಇಬ್ಬರು ಯುವಕರನ್ನು ಪೊಲೀಸರು ಥಳಿಸುತ್ತಿರುವ ದೃಶ್ಯವನ್ನು ಪದೇ ಪದೇ ಪ್ರಸಾರ ಮಾಡಿದ್ದಕ್ಕೆ ನೋಟಿಸ್ ಜಾರಿ ಮಾಡಲಾಗಿದೆ.
ಸಂಬಂಧಿತ ಮಾಹಿತಿ ಹುಡುಕಿ