ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರಾಜ್ಯಪಾಲರನ್ನು ವಾಪಸ್ ಕರೆಸಿ: ರಾಷ್ಟ್ರಪತಿಗೆ ಅಡ್ವಾಣಿ (Karnataka | BJP | BS Yeddyurappa | LK Advani)
Bookmark and Share Feedback Print
 
PR
ಕರ್ನಾಟಕದ ಬಿಜೆಪಿ ಸಂಸದರೊಂದಿಗೆ ರಾಷ್ಟ್ರಪತಿ ಪ್ರತಿಭಾ ಸಿಂಗ್ ಪಾಟೀಲ್ ಅವರನ್ನು ಭೇಟಿಯಾಗಿರುವ ಎಲ್.ಕೆ. ಅಡ್ವಾಣಿ, ಸುಷ್ಮಾ ಸ್ವರಾಜ್ ಮತ್ತು ಅರುಣ್ ಜೇಟ್ಲಿ ಮುಂತಾದ ಬಿಜೆಪಿ ನಾಯಕರು, ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರನ್ನು ತಕ್ಷಣವೇ ವಾಪಸ್ ಕರೆಸಿಕೊಳ್ಳುವಂತೆ ಒತ್ತಾಯಿಸಿದರು.

ಇಂದು ಬೆಳಿಗ್ಗೆ 11.45ರ ಹೊತ್ತಿಗೆ ರಾಷ್ಟ್ರಪತಿ ಭವನಕ್ಕೆ ತೆರಳಿದ ಬಿಜೆಪಿ ನಾಯಕರು, ಕರ್ನಾಟಕ ರಾಜ್ಯಪಾಲ ಹಂಸರಾಜ್ ಭಾರದ್ವಾಜ್ ಅವರದ್ದು ಸಂವಿಧಾನ ಬಾಹಿರ ಕ್ರಮ. ಅವರು ರಾಜ್ಯಪಾಲ ಸ್ಥಾನಕ್ಕೆ ಕಳಂಕ. ಮುಖ್ಯಮಂತ್ರಿ ಯಡಿಯೂರಪ್ಪ ವಿರುದ್ಧ ಪೂರ್ವಗ್ರಹಪೀಡಿತರಾಗಿರುವ ಭಾರದ್ವಾಜ್ ಅವರನ್ನು ವಾಪಸ್ ಕರೆಸಿಕೊಳ್ಳಿ ಎಂದು ರಾಷ್ಟ್ರಪತಿಯವರಿಗೆ ಆಗ್ರಹಿಸಿದರು.

ರಾಷ್ಟ್ರಪತಿಯವರನ್ನು ಭೇಟಿ ಮಾಡಿದ ಬಿಜೆಪಿ ವರಿಷ್ಠರ ನಿಯೋಗದಲ್ಲಿ ಅನಂತ್ ಕುಮಾರ್, ಡಿ.ಬಿ. ಚಂದ್ರೇಗೌಡ ಸೇರಿದಂತೆ ರಾಜ್ಯದ 22 ಬಿಜೆಪಿ ಸಂಸದರು ಇದ್ದರು.

ಹಂಸರಾಜ್ ಭಾರದ್ವಾಜ್ ಅವರು ಕರ್ನಾಟಕ ರಾಜ್ಯಪಾಲರಾಗಿ ನೇಮಕಗೊಂಡ ಮೊದಲ ದಿನದಿಂದಲೇ ಪಕ್ಷಪಾತಿಯಾಗಿ ನಡೆದುಕೊಳ್ಳುತ್ತಿದ್ದಾರೆ. ಅವರು ರಾಜಭವನವನ್ನು ರಾಜಕೀಯ ಕಚೇರಿಯನ್ನಾಗಿ ಮಾಡಿಕೊಂಡಿದ್ದಾರೆ ಎಂದು ತೀವ್ರ ವಾಗ್ದಾಳಿ ನಡೆಸಿದ ಅಡ್ವಾಣಿ, ಅವರನ್ನು ತಕ್ಷಣವೇ ಹಿಂದಕ್ಕೆ ಪಡೆಯಬೇಕು ಎಂದು ನಾವು ರಾಷ್ಟ್ರಪತಿಯವರನ್ನು ಒತ್ತಾಯಿಸಿದ್ದೇವೆ ಎಂದರು.

ಈ ಸಂಬಂಧ ನಾವು ಕೊಟ್ಟ ಮನವಿಯನ್ನು ಪರಿಶೀಲನೆ ನಡೆಸಿ, ರಾಜ್ಯಪಾಲರ ಕ್ರಮ ಸರಿಯೇ ಎಂಬುದನ್ನು ಕಾನೂನು ತಜ್ಞರ ಜತೆ ಸಮಾಲೋಚನೆ ನಡೆಸಿ ನಂತರವೇ ಸೂಕ್ತ ಕ್ರಮ ಕೈಗೊಳ್ಳಿ ಎಂದು ರಾಷ್ಟ್ರಪತಿಯವರಿಗೆ ನಾವು ಕೇಳಿಕೊಂಡಿದ್ದೇವೆ ಎಂದು ಭೇಟಿಯ ನಂತರ ಪತ್ರಕರ್ತರೊಂದಿಗೆ ಅಡ್ವಾಣಿ ತಿಳಿಸಿದರು.

ಬಿಜೆಪಿಯ ನಿಯೋಗದಲ್ಲಿ ಮುಖ್ಯಮಂತ್ರಿ ಬಿ.ಎಸ್. ಯಡಿಯೂರಪ್ಪ ಹೋಗಿಲ್ಲ. ರಾಷ್ಟ್ರಪತಿಯವರಿಗೆ ನೇರವಾಗಿ ದೂರು ನೀಡಲು ಹೋಗದಿರುವಂತೆ ವರಿಷ್ಠರು ಸೂಚಿಸಿದ ಹಿನ್ನೆಲೆಯಲ್ಲಿ ಅವರು ಬೆಂಗಳೂರಿಗೆ ವಾಪಸ್ಸಾದರು ಎಂದು ಮೂಲಗಳು ಹೇಳಿವೆ.
ಸಂಬಂಧಿತ ಮಾಹಿತಿ ಹುಡುಕಿ