ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಮಾಜಿ ಜಡ್ಜ್ ಮೇಲಿನ ದೂರು ಏನಾಗಿದೆ?; ಕೇಂದ್ರಕ್ಕೆ ಸುಪ್ರೀಂ (Supreme Court | GE Vahanvati | KG Balakrishnan | CBI)
ಮಾಜಿ ಮುಖ್ಯ ನ್ಯಾಯಮೂರ್ತಿ ಹಾಗೂ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗದ ಅಧ್ಯಕ್ಷ ಕೆ.ಜಿ. ಬಾಲಕೃಷ್ಣನ್ ಅಕ್ರಮ ಆಸ್ತಿ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು ಕಳೆದ ವರ್ಷ ದಾಖಲಾಗಿದ್ದ ಪ್ರಕರಣ ಏನಾಗಿದೆ ಎಂದು ಕೇಂದ್ರ ಸರಕಾರವನ್ನು ಸರ್ವೋಚ್ಚ ನ್ಯಾಯಾಲಯ ಪ್ರಶ್ನಿಸಿದೆ.

ಕೇಂದ್ರ ಗೃಹ ಸಚಿವಾಲಯಕ್ಕೆ ಕಳುಹಿಸಲಾಗಿರುವ ದೂರಿನ ಗತಿ ಏನಾಗಿದೆ ಎಂದು ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ ಅವರ ನೇತೃತ್ವದ ಸುಪ್ರೀಂ ಪೀಠವು ಸ್ಟೇಟಸ್ ವರದಿಯನ್ನು ಕೇಳಿದೆ.

ಬಾಲಕೃಷ್ಣನ್ ಮತ್ತು ಅವರ ಕುಟುಂಬದ ಸದಸ್ಯರು ಅಕ್ರಮ ಆಸ್ತಿ ಹೊಂದಿದ್ದು ಎಂದು ಆರೋಪಿಸಿದ್ದ ದೆಹಲಿ ಮೂಲದ ಪತ್ರಕರ್ತರೊಬ್ಬರು, ಈ ಕುರಿತು ಸಿಬಿಐ ತನಿಖೆ ನಡೆಸಬೇಕು ಎಂದು 2010ರ ಮೇ 5ರಂದು ಪ್ರಕರಣ ದಾಖಲಿಸಿದ್ದರು.

ಈ ಪ್ರಕರಣದ ಕುರಿತು ವಿಚಾರಣೆ ಮುಂದುವರಿಸಿದ ಸರ್ವೋಚ್ಚ ನ್ಯಾಯಾಲಯವು, ಅಟಾರ್ನಿ ಜನರಲ್ ಜಿ.ಇ. ವಹನ್ವತಿ ಅವರಲ್ಲಿ ದೂರಿನ ಸ್ಥಿತಿಯನ್ನು ಪ್ರಶ್ನಿಸಿತು. ಎರಡು ವಾರಗಳೊಳಗೆ ದೂರು ಏನಾಗಿದೆ ಎಂಬ ಬಗ್ಗೆ ನ್ಯಾಯಾಲಯಕ್ಕೆ ಮಾಹಿತಿ ನೀಡುವಂತೆ ಆದೇಶಿಸಿತು.

ಮಾನವ ಹಕ್ಕುಗಳ ಆಯೋಗದ ಮುಖ್ಯಸ್ಥರ ವಿರುದ್ಧದ ದೂರನ್ನು ಉಪ ರಾಷ್ಟ್ರಪತಿಯವರಿಗೆ ನೀಡಲಾಗಿತ್ತು. ಅದನ್ನು ಅಲ್ಲಿಂದ ಗೃಹ ಸಚಿವಾಲಯಕ್ಕೆ ವರ್ಗಾವಣೆ ಮಾಡಲಾಗಿತ್ತು. ಅಟಾರ್ನಿ ಜನರಲ್ ಅವರಿಂದ ದೂರಿನ ಕುರಿತು ಮಾಹಿತಿ ದೊರೆಯುವ ತನಕ ವಿಚಾರಣೆಯು ಮುಂದೂಡಲ್ಪಡುತ್ತದೆ ಎಂದು ನ್ಯಾಯಾಲಯವು ತಿಳಿಸಿತು.

ಸುಪ್ರೀಂ ಕೋರ್ಟ್ ಮಾಜಿ ಮುಖ್ಯ ನ್ಯಾಯಮೂರ್ತಿ ಬಾಲಕೃಷ್ಣನ್ ಅವರಲ್ಲಿ ಆದಾಯ ರಹಿತ ಅಕ್ರಮ ಆಸ್ತಿಗಳಿದ್ದು, ಇದನ್ನು ನ್ಯಾಯಾಂಗ ತನಿಖೆಗೆ ಒಳಪಡಿಸಬೇಕು ಎಂದು ನ್ಯಾಯವಾದಿ ಎಂ.ಎಲ್. ಶರ್ಮಾ ಸಲ್ಲಿಸಿದ್ದ ದೂರಿನ ವಿಚಾರಣೆ ಸಂದರ್ಭದಲ್ಲಿ ಇನ್ನೊಂದು ಪ್ರಕರಣದ ಕುರಿತು ಗಮನ ಹರಿಸಿತು.
ಇವನ್ನೂ ಓದಿ