ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ರೆಡ್ಡಿಗಳ ಮೇಲೆ ಸುಪ್ರೀಂ ಕೆಂಗಣ್ಣು; ಗಣಿ ತನಿಖೆಗೆ ಆದೇಶ (illegal mining | Karnataka | HR Bhardwaj | BS Yeddyurappa)
ರೆಡ್ಡಿಗಳು ನಡೆಸುತ್ತಿದ್ದಾರೆ ಎಂದು ಆರೋಪಿಸಲಾಗುತ್ತಿರುವ ಬಳ್ಳಾರಿ ಅಕ್ರಮ ಗಣಿಗಾರಿಕೆ ಸೇರಿದಂತೆ ಕರ್ನಾಟಕದ ಅರಣ್ಯ ಪ್ರದೇಶಗಳಲ್ಲಿ ನಡೆಸಲಾಗುತ್ತಿರುವ ಗಣಿಗಾರಿಕೆ ಕುರಿತು ತನಿಖೆ ನಡೆಸುವಂತೆ ಉನ್ನತಾಧಿಕಾರ ಸಮಿತಿಗೆ ಸರ್ವೋಚ್ಚ ನ್ಯಾಯಾಲಯ ಆದೇಶ ನೀಡಿದೆ.

ಕರ್ನಾಟಕದಲ್ಲಿನ ಅಕ್ರಮ ಗಣಿಗಾರಿಕೆ ಕುರಿತು ತನಿಖೆ ನಡೆಸಿ, ಆರು ವಾರಗಳ ಒಳಗೆ ವರದಿ ಸಲ್ಲಿಸುವಂತೆ ಸುಪ್ರೀಂ ಕೋರ್ಟ್ ನೇಮಿಸಿರುವ ಕೇಂದ್ರೀಯ ಉನ್ನತಾಧಿಕಾರ ಸಮಿತಿಗೆ ಮುಖ್ಯ ನ್ಯಾಯಮೂರ್ತಿ ಎಸ್.ಎಚ್. ಕಪಾಡಿಯಾ, ಅಫ್ತಾಬ್ ಆಲಂ ಮತ್ತು ಕೆ.ಎಸ್. ರಾಧಾಕೃಷ್ಣನ್ ಅವರನ್ನೊಳಗೊಂಡ ವಿಶೇಷ ಪೀಠವು ಆದೇಶಿಸಿದೆ.

ಕರ್ನಾಟಕದಲ್ಲಿ ಅಕ್ರಮ ಗಣಿಗಾರಿಕೆ ಮಾತ್ರ ನಡೆಯುತ್ತಿರುವುದಲ್ಲ. ಅರಣ್ಯ ಪ್ರದೇಶದಲ್ಲಿಯೂ ಗಣಿಗಾರಿಕೆ ಮುಂದುವರಿಯುತ್ತಿದೆ. ಈ ಬಗ್ಗೆ ಲೋಕಾಯುಕ್ತ ನ್ಯಾಯಮೂರ್ತಿ ಸಂತೋಷ್ ಹೆಗ್ಡೆಯವರು ಮಧ್ಯಂತರ ವರದಿ ನೀಡಿದ್ದಾರೆ. ಆದರೆ ಕರ್ನಾಟಕ ಸರಕಾರ ಇದುವರೆಗೆ ಯಾವುದೇ ಕಠಿಣ ಕ್ರಮ ಕೈಗೊಂಡಿಲ್ಲ ಎಂದು ಪ್ರಕರಣದ ವಿಚಾರಣೆ ಸಂದರ್ಭದಲ್ಲಿ ನ್ಯಾಯವಾದಿ ಪ್ರಶಾಂತ್ ಭೂಷಣ್ ಅವರು ಸುಪ್ರೀಂ ಕೋರ್ಟ್ ಗಮನಕ್ಕೆ ತಂದರು.

ಈ ಹಿಂದೆ ಆಂಧ್ರಪ್ರದೇಶದ ಅನಂತಪುರ ಜಿಲ್ಲೆಯ ಓಬಳಾಪುರಂ ಮೈನಿಂಗ್ ಕಂಪನಿ, ಮಹಾಬಲೇಶ್ವರ ಮೈನಿಂಗ್ ಕಂಪನಿ ಸೇರಿದಂತೆ ಒಟ್ಟು ಐದು ಕಂಪನಿಗಳ ಅಕ್ರಮ ಗಣಿಗಾರಿಕೆ ಆರೋಪವನ್ನು ತನಿಖೆ ನಡೆಸಲು ಸುಪ್ರೀಂ ಕೋರ್ಟ್ ಸಮಿತಿಯನ್ನು ರಚಿಸಿತ್ತು. ಇದೇ ವರ್ಷದ ಆರಂಭದಲ್ಲಿ ಆ ಸಮಿತಿ ತನ್ನ ವರದಿಯನ್ನು ಸಲ್ಲಿಸಿತ್ತು.

ಇದೇ ಮಾದರಿಯಲ್ಲಿ ಕರ್ನಾಟಕದ ಅಕ್ರಮ ಅದಿರು ಗಣಿಗಾರಿಕೆ ತನಿಖೆ ನಡೆಸಲು ಈಗ ಸುಪ್ರೀಂ ಕೋರ್ಟ್ ಆದೇಶ ನೀಡಿದೆ.
ಇವನ್ನೂ ಓದಿ