ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ವಂಚಕ ಹಸನ್ ಅಲಿಖಾನ್ ಇಂದು ನ್ಯಾಯಾಲಯಕ್ಕೆ ಹಾಜರು (Black Money | Hasan Ali | Supreme Court)
ಕಪ್ಪು ಹಣ ವರ್ಗಾವಣೆ ಹಾಗೂ ತೆರಿಗೆ ವಂಚನೆ ಪ್ರಕರಣಕ್ಕೆ ಸಂಬಧಿಸಿದಂತೆ ಬಂಧಿತನಾದ ಹಸನ್ ಅಲಿ ಖಾನ್ ಅವರನ್ನು ಇಂದು ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ಹೇಳಿದ್ದಾರೆ.

ನ್ಯಾಯಾಲಯಕ್ಕೆ ಹಾಜರುಪಡಿಸುವ ಮುನ್ನ ವೈದ್ಯಕೀಯ ಪರೀಕ್ಷೆಗಾಗಿ ಜೆಜೆ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಗಿದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ದೇಶದ ತೆರಿಗೆ ವಂಚಕರಲ್ಲಿ ಅಗ್ರಸ್ಥಾನಪಡೆದಿರುವ ಹಸನ್ ಅಲಿ ಖಾನ್ ಅವರನ್ನು, ಜಾರಿ ನಿರ್ದೆಶನಾಲಯದ ಅಧಿಕಾರಿಗಳು ಬಂಧಿಸಿ ವಿಚಾರಣೆ ನಡೆಸುತ್ತಿದ್ದಾರೆ ಎಂದು ಮೂಲಗಳು ತಿಳಿಸಿವೆ

53 ವರ್ಷ ವಯಸ್ಸಿನ ಹಸನ್ ಅಲಿಯನ್ನು ಪುಣೆಯಲ್ಲಿ ಬಂಧಿಸಿ ಮುಂಬೈಗೆ ಕರೆತರಲಾಗಿದ್ದು, ಸುಮಾರು 6 ಗಂಟೆಗಳ ಕಾಲ ವಿಚಾರಣೆ ನಡೆಸಲಾಯಿತು ಎಂದು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ದಕ್ಷಿಣ ಮುಂಬೈನಲ್ಲಿರುವ ಪೆಡ್ಡಾರ್ ರಸ್ತೆಯಲ್ಲಿ ಐಷಾರಾಮಿ ಬಂಗಲೆಯಲ್ಲಿ ಅಲಿಯನ್ನು ಬಂಧಿಸಿದ್ದು, ಜಾರಿ ನಿರ್ದೇಶನಾಲಯದ ಕೇಂದ್ರ ಕಚೇರಿಯಲ್ಲಿ ತೆರಿಗೆ ವಂಚನೆ ಬಗ್ಗೆ ವಿಚಾರಣೆ ನಡೆಸಿದ್ದಾರೆ.

ಜಾರಿ ನಿರ್ದೇಶನಾಲಯದ ಕಚೇರಿಯನ್ನು ಪ್ರವೇಶಿಸುವ ಮುನ್ನ ಮಾತನಾಡಿದ ಹಸನ್ ಅಲಿ, ನಾನು ಅಮಾಯಕ ಯಾವ ತಪ್ಪು ಮಾಡಿಲ್ಲ ಎಂದು ಸುದ್ದಿಗಾರರಿಗೆ ತಿಳಿಸಿದ್ದಾರೆ.

ಪುಣೆ, ಮುಂಬೈ ,ಗುರ್ಗಾಂವ್, ಕೋಲ್ಕತಾ ಮತ್ತು ಹೈದ್ರಾಬಾದ್ ನಗರಗಳಲ್ಲಿ ಹಸನ್ ಅಲಿ ಖಾನ್ ಹಾಗೂ ಅವರ ಸಹಚರರಿಗೆ ಸೇರಿದ ನಿವಾಸಗಳು ಮತ್ತು ಕಚೇರಿಗಳ ಮೇಲೆ ಜಾರಿ ನಿರ್ದೇಶನಾಲಯ ಅಧಿಕಾರಿಗಳು ದಾಳಿ ನಡೆಸಿದ್ದಾರೆ.
ಇವನ್ನೂ ಓದಿ