ಸರಕಾರದ ಪ್ರಸ್ತಾಪದಲ್ಲಿರುವುದು | ಅಣ್ಣಾ ಹಜಾರೆಯವರ ಪ್ರಸ್ತಾಪಗಳು |
ಲೋಕಪಾಲರಿಗೆ ಭ್ರಷ್ಟರ ವಿರುದ್ಧ ತಾವಾಗಿಯೇ ಕ್ರಮ ಆರಂಭಿಸುವ ಅಧಿಕಾರವಿರುವುದಿಲ್ಲ ಅಥವಾ ಅವರು ಭ್ರಷ್ಟಾಚಾರದ ಕುರಿತು ಸಾರ್ವಜನಿಕರಿಂದ ದೂರುಗಳನ್ನು ಸ್ವೀಕರಿಸುವಂತಿಲ್ಲ. ಲೋಕಸಭಾ ಸ್ಪೀಕರ್ ಅಥವಾ ರಾಜ್ಯಸಭಾ ಅಧ್ಯಕ್ಷರು ಅನುಮತಿ ಮೂಲಕ ಬಂದ ದೂರುಗಳನ್ನು ಮಾತ್ರವೇ ಅದು ತನಿಖೆ ನಡೆಸಬೇಕು. (ಇದು ಆಡಳಿತಾರೂಢ ಪಕ್ಷಕ್ಕೆ ತನ್ನನ್ನು ತಾನು ರಕ್ಷಿಸಿಕೊಳ್ಳುವ ಉಪಾಯ.) | ಯಾವುದೇ ಕೇಸಿನಲ್ಲಿ ತಾವಾಗಿಯೇ ತನಿಖೆ ಆರಂಭಿಸುವ ಹಕ್ಕು ಲೋಕಪಾಲರಿಗೆ ಇರಬೇಕು ಮತ್ತು ನೇರವಾಗಿ ಸಾರ್ವಜನಿಕರಿಂದ ಅವರು ದೂರುಗಳನ್ನು ಸ್ವೀಕರಿಸಬಹುದು. ಯಾವುದೇ ಕೇಸಿನ ತನಿಖೆ ಆರಂಭಿಸಲು ಯಾರದೇ ಅನುಮತಿ ಅಥವಾ ಉಲ್ಲೇಖಗಳು ಬೇಕಾಗಿಲ್ಲ. |
ಲೋಕಪಾಲ ಎಂಬುದು ಸಲಹಾ ಸಂಸ್ಥೆಯಾಗಿರುತ್ತದೆ. ಅದು ಅದರ ತನಿಖಾ ವರದಿಯನ್ನು ಅಂತಿಮ ನಿರ್ಧಾರ ಕೈಗೊಳ್ಳುವ ಅಧಿಕಾರವಿರುವ "ಜವಾಬ್ದಾರಿಯುತ ಮಂಡಳಿಗೆ" ಸಲ್ಲಿಸುತ್ತದೆ. (ಹಾಗಿದ್ದರೆ, ಲೋಕಪಾಲರು ಪ್ರಧಾನಮಂತ್ರಿ ವಿರುದ್ಧವೇ ವರದಿ ಸಲ್ಲಿಸಿದರೆ, ಅವರ ವಿರುದ್ಧ ಕ್ರಮ ಕೈಗೊಳ್ಳುವ ನಿರ್ಣಯ ತೆಗೆದುಕೊಳ್ಳುತ್ತದೆಯೇ?) | ಲೋಕಪಾಲ ಎಂಬುದು ಸಲಹಾ ಸಂಸ್ಥೆಯಲ್ಲ. ಕೇಸಿನ ವಿಚಾರಣೆ ಪೂರ್ಣಗೊಳಿಸಿದ ಬಳಿಕ ಶಿಕ್ಷೆ ವಿಧಿಸುವ ಹಕ್ಕು ಕೂಡ ಅದಕ್ಕೆ ಇರಬೇಕು. ಯಾವುದೇ ಸರಕಾರಿ ನೌಕರರ ವಿರುದ್ಧ ಶಿಸ್ತು ಕ್ರಮ ಆದೇಶಿಸುವ ಅಧಿಕಾರವನ್ನೂ ಅದು ಹೊಂದಿರಬೇಕು. |
ಲೋಕಪಾಲರಿಗೆ ಪೊಲೀಸ್ ಅಧಿಕಾರಗಳಿಲ್ಲ. ಅದರ ಎಲ್ಲ ತನಿಖೆಗಳು 'ಪ್ರಾಥಮಿಕ ತನಿಖೆಗಳಿಗೆ' ಸಮ. (ಹಾಗಿದ್ದರೆ, ಅದರ ವರದಿ ಅಂಗೀಕೃತವಾದರೆ ಚಾರ್ಜ್ ಶೀಟ್ ಸಲ್ಲಿಸುವುದು ಯಾರು?) | ಲೋಕಪಾಲರಿಗೆ ಪೊಲೀಸ್ ಅಧಿಕಾರ ಬೇಕು. ಎಫ್ಐಆರ್ ದಾಖಲು ಮಾಡಲು, ಕ್ರಿಮಿನಲ್ ತನಿಖೆ ನಡೆಸಲು ಮತ್ತು ದಂಡನಾ ಕ್ರಮಗಳನ್ನು ಕೈಗೊಳ್ಳಲು ಅವರಿಗೆ ಅಧಿಕಾರ ಬೇಕು. |
ಮಸೂದೆ ಜಾರಿಗೆ ಬಂದ ಬಳಿಕ ಕೇಂದ್ರೀಯ ತನಿಖಾ ಮಂಡಳಿಯ ಪಾತ್ರ ಏನು ಎಂಬುದರ ಉಲ್ಲೇಖವಿಲ್ಲ. ರಾಜಕಾರಣಿಗಳ ವಿರುದ್ಧ ತನಿಖೆ ಕೈಗೊಳ್ಳುವ ಸಿಬಿಐ ಅಧಿಕಾರ ಹೋಗುತ್ತದೆಯೇ? | ಸಿಬಿಐಯ ಭ್ರಷ್ಟಾಚಾರ-ನಿಗ್ರಹ ಘಟಕವನ್ನು ಲೋಕಪಾಲ ಜೊತೆ ವಿಲೀನಗೊಳಿಸಬೇಕು. ಈ ಮೂಲಕ, ಭ್ರಷ್ಟಾಚಾರ ವಿರುದ್ಧ ಕ್ರಮ ಕೈಗೊಳ್ಳಲು ಏಕೈಕ ಸ್ವತಂತ್ರ ಸಂಸ್ಥೆ ಇರುವಂತಾಗುತ್ತದೆ. |
ಭ್ರಷ್ಟಾಚಾರಕ್ಕೆ ತೀರಾ ಸಣ್ಣ ಶಿಕ್ಷೆ - ಕನಿಷ್ಠ 6 ತಿಂಗಳು, ಗರಿಷ್ಠ 7 ವರ್ಷ. | ಶಿಕ್ಷೆ ಕಠಿಣವಾಗಬೇಕು. ಕನಿಷ್ಠ 5 ವರ್ಷಗಳು ಹಾಗೂ ಗರಿಷ್ಠ ಜೀವಾವಧಿ ಶಿಕ್ಷೆ. |
ಅಕ್ರಮ ಸಂಪತ್ತು ಹೊರತೆಗೆಯುವ ಅಧಿಕಾರವಿಲ್ಲ. ಅಂದರೆ ಯಾವುದೇ ಭ್ರಷ್ಟ ವ್ಯಕ್ತಿಯು ಜೈಲಿನಿಂದ ಹೊರಬಂದ ಬಳಿಕ, ಅದೇ ಹಣ-ಸಂಪತ್ತನ್ನು ಬಳಸಿಕೊಳ್ಳಬಹುದಾಗಿದೆ. | ಭ್ರಷ್ಟಾಚಾರದಿಂದಾಗಿ ಸರಕಾರಕ್ಕೆ ಆಗುವ ನಷ್ಟವನ್ನು ಆಪಾದಿತರಿಂದಲೇ ವಸೂಲು ಮಾಡಬೇಕು. |