ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಗುಜರಾತ್‌ ಜತೆ ಕೈಜೋಡಿಸಿದ್ರೆ ತೆರಿಗೆ ದಾಳಿ: ಮೋದಿ ಕೆಂಡ (Gujrat CM | Narendra Modi | Anna Hazare | It raid | UPA Govt)
ತಮ್ಮ ಸರಕಾರದೊಂದಿಗೆ ಕೈಜೋಡಿಸಿದ ವ್ಯಕ್ತಿಗಳು ಹಾಗೂ ಕಂಪನಿಗಳ ಮೇಲೆ ಆದಾಯ ತೆರಿಗೆ ಹಾಗೂ ಗುಪ್ತಚರ ಇಲಾಖೆಗಳನ್ನು ಛೂಬಿಡುವ ಮೂಲಕ ಕೇಂದ್ರ ಸರಕಾರವು ತೊಂದರೆ ನೀಡುತ್ತಿದೆ ಎಂದು ಗುಜರಾತ್‌ ಮುಖ್ಯಮಂತ್ರಿ ನರೇಂದ್ರ ಮೋದಿ ಆಪಾದಿಸಿದ್ದಾರೆ.

ಸಮಾಜ ಸೇವಾ ಕಾರ್ಯಕರ್ತ ಅಣ್ಣಾ ಹಜಾರೆ ಅವರು ಸೇರಿದಂತೆ ಗುಜರಾತ್‌ ಸರಕಾರದ ಕಾರ್ಯವೈಖರಿಯನ್ನು ಶ್ಲಾಘಿಸುವವರಿಗೆ ಕೇಂದ್ರ ಸರಕಾರ ತೊಂದರೆ ನೀಡುತ್ತಿದೆ. ಇದು ಕೇವಲ ಹಜಾರೆ ಅವರಿಗೆ ಮಾತ್ರವಲ್ಲಿ ಗುಜರಾತ್‌ ಸರಕಾರದೊಂದಿಗೆ ಒಪ್ಪಂದ ಮಾಡಿಕೊಂಡರೆ ಆದಾಯ ತೆರಿಗೆ ದಾಳಿಯಾಗುವುದು ಖಚಿತ ಎಂದು ಆತಂಕಗೊಂಡಿದ್ದಾರೆ. ಇದು ಆಘಾತಕಾರಿ ಸಂಗತಿ ಎಂದು ಅವರು ಹೇಳಿದರು.

ಅಣ್ಣಾ ಹಜಾರೆ ಗುಜರಾತ್‌ನಲ್ಲಿ ನಡೆಯುತ್ತಿರುವ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿದ್ದರು.ಈ ನಿಟ್ಟಿನಲ್ಲಿ ಭ್ರಷ್ಟಾಚಾರದ ವಿರುದ್ಧ ಹಜಾರೆ ಅವರು ನಡೆಸುತ್ತಿರುವ ಹೋರಾಟವನ್ನು ಬೆಂಬಲಿಸಿ ನರೇಂದ್ರ ಮೋದಿ ತಮ್ಮ ಬ್ಲಾಗ್‌ನಲ್ಲಿ ಬಹಿರಂಗ ಪತ್ರ ಬರೆದಿದ್ದರು.

ಬಿಹಾರದಲ್ಲಿ ಮುಖ್ಯಮಂತ್ರಿ ನಿತೀಶ್‌ ಕುಮಾರ್‍ ನಡೆಸಿದ ಅಭಿವೃದ್ಧಿ ಕಾರ್ಯಗಳ ಬಗ್ಗೆಯೂ ಮೆಚ್ಚುಗೆ ವ್ಯಕ್ತಪಡಿಸಿರುವ ಅಣ್ಣಾ ಹಜಾರೆ ಇತರೆ ರಾಜ್ಯಗಳೂ ಇದೇ ಮಾದರಿಯಲ್ಲಿ ಅಭಿವೃದ್ಧಿ ಕಾರ್ಯ ನಡೆಸುವಂತೆ ಹೇಳಿದ್ದರು.

ಗುಜರಾತ್‌ ಹಾಗೂ ಬಿಹಾರ ಮುಖ್ಯಮಂತ್ರಿಗಳನ್ನು ಹೊಗಳಿರುವುದಕ್ಕೆ ಕಾಂಗ್ರೆಸ್‌ ಹಾಗೂ ಎಡ ಪಕ್ಷಗಳು ತೀವ್ರ ಆಕ್ಷೇಪ ವ್ಯಕ್ತಪಡಿಸಿರುವ ಹಿನ್ನೆಲೆಯಲ್ಲಿ ಪ್ರತಿಕ್ರಿಯಿಸಿದ ಹಜಾರೆ ತಾವು ಮತೀಯವಾದವನ್ನು ಬೆಂಬಲಿಸುವುದಿಲ್ಲ, ಈ ರಾಜ್ಯಗಳಲ್ಲಿ ನಡೆದ ಅಭಿವೃದ್ಧಿ ಕಾರ್ಯಗಳ ಬಗ್ಗೆ ಮೆಚ್ಚುಗೆ ವ್ಯಕ್ತಪಡಿಸಿರುವುದಾಗಿ ತಿಳಿಸಿದ್ದರು.
ಇವನ್ನೂ ಓದಿ