ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಭ್ರಷ್ಟಾಚಾರಕ್ಕೆ ಬೆಂಬಲವಿಲ್ಲ, ಸಂದೇಹ ಬೇಡ: ಅಣ್ಣಾಗೆ ಸೋನಿಯಾ (Sonia Gandhi | Anna Hazare | corruption | Lokpal bill)
ಕಾಂಗ್ರೆಸಿಗರಿಂದ ಭ್ರಷ್ಟಾಚಾರ ವಿರುದ್ಧದ ತಮ್ಮ ಹೋರಾಟಕ್ಕೆ ಅಡ್ಡಿಯಾಗುತ್ತಿದೆ ಎಂಬ ಸಾಮಾಜಿಕ ಹೋರಾಟಗಾರ ಅಣ್ಣಾ ಹಜಾರೆ ಪತ್ರಕ್ಕೆ ಪ್ರತಿಕ್ರಿಯಿಸಿರುವ ಕಾಂಗ್ರೆಸ್‌ ಪಕ್ಷದ ರಾಷ್ಟ್ರೀಯ ಅಧ್ಯಕ್ಷೆ ಸೋನಿಯಾ ಗಾಂಧಿ, ಲೋಕಪಾಲ ಮಸೂದೆ ಕರಡು ಸಮಿತಿಯ ಸದಸ್ಯರ ವಿರುದ್ಧ ತೇಜೋವಧೆ ಮಾಡುವ ರಾಜಕೀಯ ಆಂದೋಲನಕ್ಕೆ ತಮ್ಮ ಬೆಂಬಲವಿಲ್ಲ ಎಂದು ಹೇಳಿದ್ದಾರೆ.

ಸಮಿತಿ ಸದಸ್ಯರ ವಿರುದ್ಧ ಕಾಂಗ್ರೆಸ್‌ ಪಕ್ಷದ ಮುಖಂಡರು ಅಪಪ್ರಚಾರ ಮಾಡುತ್ತಿದ್ದಾರೆ ಎಂದು ಹಜಾರೆ ಅವರು ಸೋಮವಾರ ಬರೆದಿರುವ ಪತ್ರಕ್ಕೆ ಬುಧವಾರ ಪ್ರತಿಕ್ರಿಯಿಸಿರುವ ಸೋನಿಯಾ ಗಾಂಧಿ, ಲೋಕಪಾಲ ಮಸೂದೆಯನ್ನು ಜಾರಿಗೊಳಿಸುವುದು ತಾವು ಅಧ್ಯಕ್ಷರಾಗಿರುವ ರಾಷ್ಟ್ರೀಯ ಸಲಹಾ ಮಂಡಳಿಯ ಪ್ರಮುಖ ಉದ್ದೇಶ. ಮಸೂದೆಗೆ ಅನುಮೋದನೆ ನೀಡುವ ಕುರಿತು ಏ.28 ರಂದು ನಡೆಯಲಿರುವ ಮಂಡಳಿ ಸಭೆಯಲ್ಲಿ ಚರ್ಚಿಸಲಾಗುವುದು ಎಂದು ಹೇಳಿದ್ದಾರೆ.

ಲೋಕಪಾಲ ಕರಡು ಸಮಿತಿ ಸದಸ್ಯರ ಕುರಿತು ಮಾಧ್ಯಮಗಳಲ್ಲಿ ಸುದ್ದಿ ಪ್ರಸಾರವಾಗುತ್ತಿದ್ದು, ನಾಗರಿಕ ಸಮಿತಿ ಸದಸ್ಯರ ಹೆಸರಿಗೆ ಮಸಿ ಬಳಿಯುವ ಕೃತ್ಯಕ್ಕೆ ಬೆಂಬಲಿಸುವುದಿಲ್ಲ ಎಂದು ಹಜಾರೆ ಅವರಿಗೆ ಬರೆದ ಪತ್ರದಲ್ಲಿ ಭರವಸೆ ನೀಡಿದ್ದಾರೆ.

ಕರಡು ರಚನಾ ಸಮಿತಿಯಲ್ಲಿರುವ ಸಚಿವರೊಬ್ಬರು (ಕಪಿಲ್‌ ಸಿಬಾಲ್‌) ಹಾಗೂ ಪಕ್ಷವೊಂದರ ಪ್ರಧಾನ ಕಾರ್ಯದರ್ಶಿ (ದಿಗ್ವಿಜಯ ಸಿಂಗ್‌) ಭ್ರಷ್ಟಾಚಾರ ವಿರೋಧಿ ಆಂದೋಲನಕ್ಕೆ ಅಡ್ಡಿಯುಂಟು ಮಾಡುತ್ತಿದ್ದಾರೆ ಎಂದು ಹಜಾರೆ ಆಪಾದಿಸಿದ್ದರು.

ಇದಕ್ಕೆ ಪ್ರತಿಕ್ರಿಯಿಸಿದ ಸೋನಿಯಾ ಭ್ರಷ್ಟಾಚಾರದ ವಿರುದ್ಧ ಹೋರಾಡುವುದೇ ತಮ್ಮ ಮುಖ್ಯ ಉದ್ದೇಶ ಎಂದು ಪುನರುಚ್ಚರಿಸಿದ್ದಾರೆ.

ಸಂವಿಧಾನ ಹಾಗೂ ಪ್ರಜಾಪ್ರಭುತ್ವದ ಆಶಯವನ್ನು ಪ್ರತಿಪಾದಿಸುವ ಲೋಕಪಾಲ ಮಸೂದೆಯನ್ನು ತಾವು ಬೆಂಬಲಿಸಲು ತಾವು ಬದ್ಧರಾಗಿದ್ದು, ಇದರಲ್ಲಿ ಯಾವುದೇ ಸಂದೇಹ ಬೇಡ ಎಂದು ಸೋನಿಯಾ ಅವರು ಹಜಾರೆಗೆ ತಿಳಿಸಿದ್ದಾರೆ.
ಇವನ್ನೂ ಓದಿ