ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ನಕಲಿ ಎನ್‌ಕೌಂಟರ್‌: ಜೀವಾವಧಿ ಶಿಕ್ಷೆ ಎತ್ತಿಹಿಡಿದ ಸುಪ್ರೀಂ (CP, Fake Encounter Case, Supreme Court, Verdict)
ಉದ್ಯಮಿಗಳಿಬ್ಬರನ್ನು ನಕಲಿ ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸೋಮವಾರ ವಿಚಾರಣೆ ನಡೆಸಿದ ಸುಪ್ರೀಂಕೋರ್ಟ್‌, ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿ ಸೇರಿದಂತೆ 10 ಮಂದಿ ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸಿ ದೆಹಲಿ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಎತ್ತಿಹಿಡಿದಿದೆ.

ದೆಹಲಿ ಹೈಕೋರ್ಟ್‌ ನೀಡಿದ್ದ ತೀರ್ಪನ್ನು ಪ್ರಶ್ನಿಸಿ ಆರೋಪಿತರು ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಎಚ್‌.ಎಸ್‌.ಬೇಡಿ ಹಾಗೂ ಸಿ.ಕೆ.ಪ್ರಸಾದ್‌ ನೇತೃತ್ವದ ನ್ಯಾಯಪೀಠ ಅರ್ಜಿಯನ್ನು ವಜಾಗೊಳಿಸಿದೆ.

ಹರಿಯಾಣ ಮೂಲದ ಇಬ್ಬರು ಉದ್ಯಮಿಗಳನ್ನು ತಪ್ಪಾಗಿ ಗುರುತಿಸಿ ಎನ್‌ಕೌಂಟರ್‌ ಮಾಡಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಚಾರಣೆ ನಡೆಸಿದ ದೆಹಲಿ ಹೈಕೋರ್ಟ್‌, 2009ರ ಸೆ.18ರಂದು ಸಹಾಯಕ ಪೊಲೀಸ್‌ ವರಿಷ್ಠಾಧಿಕಾರಿ ಎಸ್‌.ಎಸ್‌.ರಾಠಿ ಸೇರಿದಂತೆ 10 ಮಂದಿ ಪೊಲೀಸರಿಗೆ ಜೀವಾವಧಿ ಶಿಕ್ಷೆ ವಿಧಿಸಿತ್ತು.

ಈ ಪ್ರಕರಣಕ್ಕೆ ಸಂಬಂದಪಟ್ಟಂತೆ ವಿಚಾರಣಾಧೀನ ನ್ಯಾಯಾಲಯ 2007ರ ಅಕ್ಟೋಬರ್‌ 24ರಂದು ಆರೋಪಿಗಳಿಗೆ ಶಿಕ್ಷೆ ವಿಧಿಸಿತ್ತು.
ಇನ್ಸ್‌ಪೆಕ್ಟರ್‌ ಅನಿಲ್‌ ಕುಮಾರ್‌, ಸಬ್‌ ಇನ್ಸ್‌ಪೆಕ್ಟರ್‌ ಅಶೋಕ್‌ ರಾಣಾ, ಹೆಡ್‌ ಕಾನ್‌ಸ್ಟೇಬಲ್‌ಗಳಾದ ಶಿವಕುಮಾರ್‌, ತೇಜಪಾಲ್‌ಸಿಂಗ್‌, ಮಹಾವೀರ್‌ಸಿಂಗ್‌ ಹಾಗೂ ಕಾನ್‌ಸ್ಟೇಬಲ್‌ಗಳಾದ ಸಮರ್‌ಸಿಂಗ್‌, ಸುಭಾಷ್‌ಚಂದ್‌, ಸುನಿಲ್‌ ಕುಮಾರ್‌ ಮತ್ತು ಕೊಠಾರಿ ರಾಮ್‌ ಶಿಕ್ಷೆಗೊಳಗಾದ ಇತರೆ ಆರೋಪಿತರು.

ದೆಹಲಿ ಪೊಲೀಸ್‌ ಎನ್‌ಕೌಂಟರ್‌ ಸ್ಪೆಷಲಿಸ್ಟ್‌ ರಾಠಿ ನೇತೃತ್ವದ ಪೊಲೀಸರ ತಂಡ 1997ರ ಮಾರ್ಚ್‌ 31ರಂದು ಕಾರಿನಲ್ಲಿ ಬಂದ ಇಬ್ಬರು ವ್ಯಕ್ತಿಗಳನ್ನು ದರೋಡೆಕೋರರು ಎಂದು ತಪ್ಪಾಗಿ ಭಾವಿಸಿ ಅವರ ಮೇಲೆ ಗುಂಡುಹಾರಿಸಿತ್ತು.
ಇವನ್ನೂ ಓದಿ