ಧೈರ್ಯವಿದ್ದರೆ ಚುನಾವಣೆ ಘೋಷಿಸಿ, ಸೋನಿಯಾಗಾಂಧಿ, ರಾಹುಲ್ ಗಾಂಧಿ ಭಾವಚಿತ್ರಗಳನ್ನು ಇಟ್ಟುಕೊಂಡು ಸ್ಪರ್ಧಿಸಿ, ಅದನ್ನು ನಾನು ಎದುರಿಸಲು ಸಿದ್ದ ಎಂದು ಜಗನ್ಮೋಹನ್ ರೆಡ್ಡಿ ಕಾಂಗ್ರೆಸ್‌ಗೆ ನೇರ ಸವಾಲು ಹಾಕಿದ್ದಾರೆ.
ಕಡಪಾ ಲೋಕಸಭಾ ಕ್ಷೇತ್ರದ ಉಪ ಚುನಾವಣೆಯಲ್ಲಿ ಐದು ಲಕ್ಷ ಮತಗಳಿಗಿಂತ ಹೆಚ್ಚು ಅಂತರದಿಂದ ಜಯ ಸಾಧಿಸಿರುವ ವೈ.ಎಸ್.ಜಗನ್ಮೋಹನ್ ರೆಡ್ಡಿ, ಧೈರ್ಯವಿದ್ದರೆ ಕಾಂಗ್ರೆಸ್ ಅಧ್ಯಕ್ಷೆ ಹಾಗೂ ರಾಹುಲ್ ಗಾಂಧಿ ಅವರ ಭಾವಚಿತ್ರ ಹಿಡಿದುಕೊಂಡು ಕಣಕ್ಕಿಳಿಯಿರಿ. ನಾನು ತಂದೆ,ಮಾಜಿ ಸಿಎಂ ವೈ.ಎಸ್.ರಾಜಶೇಖರ ರೆಡ್ಡಿ ಅವರ ಭಾವಚಿತ್ರ ಹಿಡಿದುಕೊಂಡು ಸ್ಪರ್ಧಿಸುತ್ತೇನೆ ಎಂದು ಕಾಂಗ್ರೆಸ್ ಪಕ್ಷಕ್ಕೆ ಸವಾಲೊಡ್ಡಿದ್ದಾರೆ.
ಕಡಪಾ ಲೋಕಸಭಾ ಕ್ಷೇತ್ರದಲ್ಲಿ ಜಗನ್ಮೋಹನ್ ರೆಡ್ಡಿ ಹಾಗೂ ಪುಲಿವೆಂದುಲ ವಿಧಾನಸಭಾ ಕ್ಷೇತ್ರದ ಉಪ ಚುನಾವಮೆಯಲ್ಲಿ ಜಗನ್ ತಾಯಿ ವಿಜಯಲಕ್ಷ್ಮಿ ಅವರು ಭರ್ಜರಿ ಜಯ ದಾಖಲಿಸಿ ಕಾಂಗ್ರೆಸ್ ಮುಖಭಂಗ ಅನುಭವಿಸುವಂತೆ ಮಾಡಿದ್ದರು.