ರಾಷ್ಟ್ರೀಯ | ಅಂತಾರಾಷ್ಟ್ರೀಯ | ರಾಜ್ಯ ಸುದ್ದಿ | ಪ್ರಚಲಿತ | ವಿಮಾನ ದುರಂತ | ಸರ್ವಜ್ಞ
ಮುಖ್ಯ ಪುಟ » ಸುದ್ದಿ ಜಗತ್ತು » ಸುದ್ದಿಗಳು » ರಾಷ್ಟ್ರೀಯ » ಕಪ್ಪು ಹಣ-ಕಾಂಗ್ರೆಸ್ಸಿಗರಿಗೆ ಜೈಲಿ ಹೋಗೋ ಭಯ: ಮೋದಿ (Narendra Modi | Gujarath | Congress | Black money | Ram dev | Arrest)
PTI
ಡಿಎಂಕೆ ಮುಖಂಡರನ್ನು ಜೈಲಿಗೆ ಕಳುಹಿಸಿರುವ ಕಾಂಗ್ರೆಸಿಗೆ ಈಗ ಕಪ್ಪು ಹಣದಿಂದ ಜೈಲಿಗೆ ಹೋಗುವ ಭಯ ಕಾಡುತ್ತಿದೆ ಎಂದು ವ್ಯಂಗ್ಯವಾಡಿರುವ ಗುಜರಾತ್ ಮುಖ್ಯಮಂತ್ರಿ ನರೇಂದ್ರ ಮೋದಿ, ಭ್ರಷ್ಟಾಚಾರದ ವಿರುದ್ಧ ಹೋರಾಡುತ್ತಿದ್ದ ಬಾಬಾ ರಾಮದೇವ್ ಬಂಧನ ದೇಶದ ಇತಿಹಾಸದಲ್ಲಿಯೇ ಕರಾಳ ದಿನ ಎಂದು ಬಣ್ಣಿಸಿದ್ದಾರೆ.

ರಾಮಲೀಲಾ ಮೈದಾನದಲ್ಲಿ ರಾವಣಲೀಲೆ ನಡೆದಿದೆ ಎಂದು ವಾಗ್ದಾಳಿ ನಡೆಸಿದ ಅವರು, ಅಧಿಕಾರಕ್ಕೆ ಬಂದ ನೂರು ದಿನಗಳೊಳಗೆ ಕಪ್ಪು ಹಣವನ್ನು ವಾಪಸ್ ತರುವೆ ಎಂದು ಪ್ರಧಾನಮಂತ್ರಿ ಮನಮೋಹನ್ ಸಿಂಗ್ ಹೇಳಿದ್ದರು. ಆದರೆ ಈಗ ಯುಪಿಎ 2 ಸರಕಾರ ಬಂದು ಎರಡು ವರ್ಷವಾಗಿದೆ. ಏನೂ ಆಗಿಲ್ಲ ಎಂದು ಟೀಕಿಸಿದರು.

ಯಾವುದೇ ಕಾರಣಕ್ಕೂ ಕಪ್ಪು ಹಣ ವಾಪಸಾತಿ ಮತ್ತು ಭ್ರಷ್ಟಾಚಾರದ ವಿರುದ್ಧದ ಹೋರಾಟ ನಿಲ್ಲಿಸಬಾರದು ಎಂದು ಯುವಕರಿಗೆ ಕರೆ ನೀಡಿರುವ ಅವರು ಈ ಬಗ್ಗೆ ದೇಶಾದ್ಯಂತ ಪ್ರತಿಭಟನೆ ತೀವ್ರಗೊಳ್ಳಬೇಕು ಎಂದರು.

ಇಲ್ಲಿನ ಮನಿಗವರ್ ಎಂಬಲ್ಲಿ ದಂತವೈದ್ಯ ಕಾಲೇಜನ್ನು ಉದ್ಘಾಟಿಸಿ ಮಾತನಾಡಿದ ಅವರು, ಉಪವಾಸ ನಿರತ ಬಾಬಾ ರಾಮದೇವ್ ಅವರ ಹೋರಾಟ ಹತ್ತಿಕ್ಕಲು ಕೇಂದ್ರ ಸರಕಾರ ವ್ಯವಸ್ಥಿತ ಷಡ್ಯಂತ್ರ ನಡೆಸಿ ಅಮಾಯಕ ಜನರ ಮೇಲೆ ದೌರ್ಜನ್ಯ ನಡೆಸಿರುವುದಾಗಿ ಆರೋಪಿಸಿದರು.

ಈ ಘಟನೆಗೆ ದೆಹಲಿ ಸರಕಾರ ಹೊಣೆಯಲ್ಲ, ಪ್ರಧಾನಿ ಮನಮೋಹನ್ ಸಿಂಗ್ ಅವರೇ ನೇರ ಹೊಣೆ ಎಂದು ವಾಗ್ದಾಳಿ ನಡೆಸಿದರು. ಬಾಬಾ ಅವರನ್ನು ಅಮಾನವೀಯ ರೀತಿಯಲ್ಲಿ ಬಂಧಿಸುವ ಅಗತ್ಯ ಏನಿತ್ತು ಎಂದು ಮೋದಿ ಈ ಸಂದರ್ಭದಲ್ಲಿ ಖಾರವಾಗಿ ಪ್ರಶ್ನಿಸಿದರು.
ಇವನ್ನೂ ಓದಿ