ಯೋಗ ಗುರು ಬಾಬಾ ರಾಮದೇವ್ ಅವರ ಬೆಂಬಲಿಗರನ್ನು ರಾಮಲೀಲಾ ಮೈದಾನದಲ್ಲಿ ಪೊಲೀಸರು ಬಂಧಿಸಿದ್ದ ಕುರಿತು ಕಾಂಗ್ರೆಸ್ ಅಧ್ಯಕ್ಷೆ ಸೋನಿಯಾ ಗಾಂಧಿ ಹಾಗೂ ಪಕ್ಷದ ಪ್ರಧಾನ ಕಾರ್ಯದರ್ಶಿ ರಾಹುಲ್ ಗಾಂಧಿ ಏಕೆ ಮೌನ ವಹಿಸಿದ್ದಾರೆ ಎಂದು ಬಿಜೆಪಿ ಗುರುವಾರ ಪ್ರಶ್ನಿಸಿದೆ.
ಭತ್ತಾ ಪ್ರಸೂಲ್‌ನಲ್ಲಿ ರೈತರು ನಡೆಸುತ್ತಿರುವ ಪ್ರತಿಭಟನೆಯಲ್ಲಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದ ಸೋನಿಯಾ ಗಾಂಧಿ ಹಾಗೂ ರಾಹುಲ್ ಗಾಂಧಿ ಅವರು ರಾಮದೇವ್ ಪ್ರಕರಣದ ಕುರಿತು ಒಂದು ಶಬ್ದವನ್ನೂ ಮಾತನಾಡಲಿಲ್ಲ ಎಂದು ಬಿಜೆಪಿ ವಕ್ತಾರರೂ ಆಗಿರುವ ಪಕ್ಷದ ಪ್ರಧಾನ ಕಾರ್ಯದರ್ಶಿ ಜೆ.ಪಿ. ನಡ್ಡಾ ಸುದ್ದಿಗಾರರಿಗೆ ತಿಳಿಸಿದರು.
ಭತ್ತಾ ಪ್ರಸೂಲ್‌ನಲ್ಲಿ ರೈತರು ನಡೆಸುತ್ತಿದ್ದ ಹೋರಾಟದಲ್ಲಿ ಪಾಲ್ಗೊಂಡಿದ್ದ ಸೋನಿಯಾ ಗಾಂಧಿ ಹಾಗೂ ರಾಹುಲ್ ರೈತರ ಮೇಲೆ ಪೊಲೀಸರು ನಡೆಸಿದ ದೌರ್ಜನ್ಯವನ್ನು ಖಂಡಿಸಿದರು ಆದರೆ ರಾಮಲೀಲಾ ಮೈದಾನದಲ್ಲಿ ಬಾಬಾ ರಾಮದೇವ್ ಹಾಗೂ ಅವರ ಬೆಂಬಲಿಗರ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಖಂಡಿಸಲಿಲ್ಲ. ಇದು ಅವರ ರಾಜಕೀಯ ಔಚಿತ್ಯವನ್ನು ಪ್ರದರ್ಶಿಸುತ್ತದೆ ಹಾಗೂ ಜನ ಸಾಮಾನ್ಯರ ಹಕ್ಕುಗಳ ರಕ್ಷಣೆಗೆ ಅವರಿಗೆ ಇರುವ ಬದ್ಧತೆಯ ಬಗ್ಗೆಯೂ ತಿಳಿದು ಬರುತ್ತದೆ ಎಂದು ಹೇಳಿದರು.
ಮಾತುಕತೆ ನಡೆಸುವ ಸರಕಾರದಲ್ಲೇ ಭಿನ್ನಾಭಿಪ್ರಾಯವಿದೆ. ಮಾತುಕತೆ ನಡೆಸಲು ವಿತ್ತ ಸಚಿವ ಪ್ರಣಬ್ ಮುಖರ್ಜಿಪ್ರಸ್ತಾಪಿಸಿದರೆ ಗೃಹ ಸಚಿವ ಪಿ.ಚಿದಂಬರಂ ಹಾಗೂ ಕಪಿಲ್ ಸಿಬ್ಬಾಲ್ ಕಠಿಣ ಕ್ರಮ ಕೈಗೊಳ್ಳಲು ಬಯಸಿದ್ದಾರೆ ಎಂದು ನಡ್ಡಾ ಹೇಳಿದರು.
ಬಾಬಾ ರಾಮ್‌ದೇವ್ ಹಾಗೂ ಗಾಂಧಿ ವಾದಿ ಅಣ್ಣಾ ಹಜಾರೆ ಅವರು ರಾಜಕೀಯ ಸ್ಥಾನವನ್ನು ಆಕ್ರಮಿಸಿಕೊಂಡಿದ್ದಾರೆಯೇ ಎಂದು ಕೇಳಿದ ಪ್ರಶ್ನೆಗೆ ಉತ್ತರಿಸಿದ ನಡ್ಡಾ, ನಾವು ಭ್ರಷ್ಟಾಚಾರ ಹಾಗೂ ಕಪ್ಪು ಹಣದ ವಿರುದ್ಧ ಉಗ್ರ ಪ್ರತಿಭಟನೆ ನಡೆಸುತ್ತಿದ್ದೇವೆ. ಹಣದುಬ್ಬರದಿಂದಾಗಿ ಜನಸಾಮಾನ್ಯವ ಮೇಲೆ ಆಗುತ್ತಿರುವ ದುಷ್ಪರಿಣಾಮಗಳ ಬಗ್ಗೆಯೂ ದನಿ ಎತ್ತಿದ್ದೇವೆ ಎಂದು ಹೇಳಿದರು.